ಇತ್ತೀಚೆಗೆ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17 ನೇ ಕಂತು ಬಿಡುಗಡೆ ಮಾಡಿದರು. ಈ ಹಿನ್ನಲೆಯಲ್ಲಿ 18ನೇ ಕಂತಿನ ಬಿಡುಗಡೆ ದಿನಾಂಕದ ಪ್ರಮುಖ ಮಾಹಿತಿ ಹೊರಬಿದ್ದಿದೆ.
ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಜಾರಿಗೊಳಿಸುತ್ತಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯಿಂದ ಲಕ್ಷಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣಕ್ಕಾಗಿ ನೀವೇನಾದರೂ ಕಾದು ಕುಳಿತಿದ್ದರೆ, ಹಾಗೂ 18ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ ಎಂದು ನೀವೇನಾದರೂ ಕಾಯುತ್ತಿದ್ದರೆ, ಇದರ ಚಿಂತೆ ಬಿಡಿ, ಯಾಕೆಂದರೆ ಅಕ್ಟೋಬರ್ 5 ರಂದು 18ನೇ ಕಂತಿನ ಪಿಎಂ ಕಿಸಾನ್ ಯೋಜನೆಯ ಹಣ ಅರ್ಹರಿರುವ ಫಲಾನುಭವಿ ರೈತರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆ ಮಾಡಿದರು. ಈ ಹಣವನ್ನು 18 ಜೂನ್ 2024 ರಂದು ರೈತರ ಖಾತೆಗೆ ಜಮಾ ಮಾಡಲಾಗಿದೆ. ಈ ಯೋಜನೆಯ ಭಾಗವಾಗಿ ಒಟ್ಟು 9 ಕೋಟಿ ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ.