PM Kisan :ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ-ಕಿಸಾನ್) ಭಾರತದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅಗತ್ಯ ಹಣಕಾಸಿನ ನೆರವು ನೀಡುತ್ತಿದ್ದು, ರೈತರು ವಾರ್ಷಿಕವಾಗಿ ₹6,000 ಆರ್ಥಿಕ ನೆರವು ಪಡೆಯುತ್ತಾರೆ. ಇದನ್ನು ತಲಾ ₹2,000 ನಂತೆ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ.
ಹೌದು, ಈ ಯೋಜನೆಯಡಿ ಇದುವರೆಗೂ ಕೇಂದ್ರ ಸರ್ಕಾರ ₹2,000 ರೂ ನಂತೆ 18 ಕಂತುಗಳನ್ನು ರೈತರ ಖಾತೆಗೆ ಜಮೆ ಮಾಡಿದ್ದೂ,19ನೇ ಕಂತು ಫೆಬ್ರವರಿ 2025ರಲ್ಲಿ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.
ಇದನ್ನೂ ಓದಿ: Birth and death certificate : ಇನ್ಮುಂದೆ ಗ್ರಾಮ ಪಂಚಾಯತ್ ನಲ್ಲೇ ಸಿಗಲಿದೆ ಜನನ, ಮರಣ ಪ್ರಮಾಣ ಪತ್ರ
PM Kisan : ಪಿಎಂ ಕಿಸಾನ್ ಮುಂದಿನ ಕಂತಿನ ಹಣಕ್ಕಾಗಿ ಈ ಕೆಲಸ ಮಾಡಲೇಬೇಕು
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಯಾಗಿದ್ದರೆ ಮುಂದಿನ ಕಂತಿನ ಹಣ ನಿಮ್ಮ ಖಾತೆಗೆ ಫೆಬ್ರವರಿ ತಿಂಗಳಲ್ಲಿ ಜಮೆ ಆಗಲಿದೆ ಎನ್ನಲಾಗಿದ್ದು, ಮುಂದಿನ ಕಂತಿನ ₹2000 ನೀವು ಪಡೆಯಬೇಕಾದರೆ, ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.
ಇದಲ್ಲದೆ, ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರಬೇಕಾಗಿದ್ದು, ಅಧಿಕೃತ ವೆಬ್‌ಸೈಟ್ ಭೇಟಿ ನೀಡದೆಯೂ ರೈತರು ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದ್ದು, ಪಿಎಂ ಕಿಸಾನ್ ಆ್ಯಪ್‌ನಲ್ಲಿ ಫೇಸ್ ಅಥೆಂಟಿಕೇಷನ್ ಮಾಡುವ ಮೂಲಕ ರೈತರು ಈ ಕೆಲಸವನ್ನು ಸುಲಭವಾಗಿ ಮಾಡಬಹುದು.