ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ 2ನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಕೋರ್ಟ್ ಬಿಗ್ ಶಾಕ್ ನೀಡಿದೆ. ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರಿಗೆ ಜೈಲೇಗತಿ ಎನ್ನುವಂತೆ ಆಗಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ 2ನೇ ಲೈಂಗಿಕ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಅಂದಹಾಗೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದಾವೆ. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಅವರು ಇಂದು ಜಾಮೀನು ನಿರೀಕ್ಷೆಯಲ್ಲಿದ್ದರು. ಆದರೇ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ತಿರಸ್ಕರಿಸಿ ಬಿಗ್ ಶಾಕ್ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment