ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್. ಅವರ ಸೂಚನೆಯಂತೆ ಇವರು ಕಾರ್ಯನಿರ್ವಹಿಸುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಹುಬ್ಬಳ್ಳಿಯಲ್ಲಿ ಹಾಕಿದ್ದ ಕೇಸ್‌ಗಳನ್ನ ವಾಪಾಸ್ ಪಡೆಯಲು ಬಿಗ್‌ಬಾಸ್‌ಗಳು ಹೇಳಿದರು. ಅದಕ್ಕೆ ಇವರು ವಾಪಾಸ್ ಪಡೆದಿದ್ದಾರೆ ಎಂದಿದ್ದಾರೆ.
ಹಿಂದೂಗಳ ಮೇಲಿನ ಕೇಸ್‌ನ ಯವಾತ್ತಾದರೂ ಹಿಂಪಡೆದಿದ್ದೀರಾ? ರೇಪ್ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಗಿದೆ. ಆದರೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಯಾಕೆ ಜೈಲಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಮೇಲೆ ಮುಡಾ, ವಾಲ್ಮೀಕಿ ಹಗರಣ ಆರೋಪಗಳಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಮೇಲೆ ಆರೋಪ ಬಂದ ಬಳಿಕ ಸೈಟ್ ವಾಪಾಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅವರ ಪಕ್ಷದವರೇ ಬೆಂಬಲ ಕೊಡುತ್ತಿಲ್ಲ. ಮುಸ್ಲಿಮರ ಒಲೈಕೆ ಮಾಡಿ ಉಳಿಯಬೇಕು ಎಂದು ಅವರು ಮುಂದಾಗಿದ್ದಾರೆ ಎಂದಿದ್ದಾರೆ.