ಸೂಪರ್ ಸ್ಟಾರ್ ರಜನಿಕಾಂತ್ ಅಪೋಲೋ ಆಸ್ಪತ್ರೆಗೆ ದಾಖಲು!

ತಮಿಳು ಚಿತ್ರರಂಗದ ಸೂಪರ್​ ಸ್ಟಾರ್​​ ರಜನಿಕಾಂತ್​​​ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಲೈವ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂಬ ಆಸ್ಪತ್ರೆ ಮೂಲಗಳು ತಿಳಿಸಿವೆ. ನೆಲ್ಸನ್​​ ದಿಲೀಪ್​​ಕುಮಾರ್​ ಅವರ…

ತಮಿಳು ಚಿತ್ರರಂಗದ ಸೂಪರ್​ ಸ್ಟಾರ್​​ ರಜನಿಕಾಂತ್​​​ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಲೈವ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂಬ ಆಸ್ಪತ್ರೆ ಮೂಲಗಳು ತಿಳಿಸಿವೆ.

ನೆಲ್ಸನ್​​ ದಿಲೀಪ್​​ಕುಮಾರ್​ ಅವರ ‘ಜೈಲರ್’  ಸಿನಿಮಾದಲ್ಲಿ  ಕಾಣಿಸಿಕೊಂಡಿದ್ದರು. ಸದ್ಯ ವೆಟ್ಟೈಯನ್ ಸಿನಿಮಾದ ಬಿಡುಗಡೆಯ ಹಂತದಲ್ಲಿದ್ದಾರೆ. ಸದ್ಯ ರಜನಿಕಾಂತ್​ಗೆ ಹೊಟ್ಟೆ ನೋವು ಕಾಡಿದೆ. ಅದರಿಂದ ಬಳಲುತ್ತಿದ್ದ ನಟ ಆಸ್ಪತ್ರೆ ಸೇರಿದ್ದಾರೆ. ಇಂಟರ್ವೆನ್ಷನಲ್​​ ಕಾರ್ಡಿಯಾಲಜಿಸ್ಟ್​​ ಡಾ ಸಾಯಿ ಸತೀಶ್​ ಅವರ ಮಾರ್ಗದರ್ಶನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಕ್ಯಾಬ್ ಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಸದ್ಯ ತಲೈವಾ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Vijayaprabha Mobile App free

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್  ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಅಂದಹಾಗೆಯೇ ಇದು ಆ್ಯಕ್ಷನ್​​​ ಪ್ಯಾಕ್ಡ್​​​ ಮನರಂಜನೆಯ ಸಿನಿಮಾವಾಗಿದ್ದು, ಅಕ್ಟೋಬರ್​​ 10ರಂದು ರಿಲೀಸ್ ಆಗಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.