ಈ ವರ್ಷ ದಾಖಲಾದ ಅತ್ಯಾಚಾರ, ಪೋಕ್ಸೊ ಪ್ರಕರಣಗಳ ಸಂಖ್ಯೆ ಎಷ್ಟು? ಹೆಚ್ಚಿನ ಸಂಸದರು, ಶಾಸಕರು ಯಾವ ಪಕ್ಷಗಳಲ್ಲಿದ್ದಾರೆ?

Rape POCSO case Rape POCSO case

Rape and POCSO case: ಈ ವರ್ಷದ ಜನವರಿಯಿಂದ ಜುಲೈವರೆಗೆ ರಾಜ್ಯದಲ್ಲಿ 340 ಅತ್ಯಾಚಾರ (Rape case) ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 234 ಅತ್ಯಾಚಾರ ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದರೆ, 106 ಪ್ರಕರಣಗಳ ವಿಚಾರಣೆ ಇನ್ನೂ ಆಗಬೇಕಿದೆ.

ಹೌದು, ಈ ವರ್ಷದ ಜುಲೈವರೆಗೆ ದಾಖಲಾದ ಒಟ್ಟು 2,089 ಪೋಕ್ಸೊ ಪ್ರಕರಣಗಳ ( POCSO case) ಪೈಕಿ 1,015 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದರೆ 1,074 ಪ್ರಕರಣಗಳ ವಿಚಾರಣೆ ಬಾಕಿ ಇದೆ. ಉಳಿದಂತೆ, 3,643 ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರ ಮೇಲಿನ ಪ್ರಕರಣವೂ ಕೂಡ ಒಂದು

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಹೊಂದಿರುವ ಹೆಚ್ಚಿನ ಸಂಸದರು, ಶಾಸಕರು ಯಾವ ಪಕ್ಷಗಳಲ್ಲಿದ್ದಾರೆ?

Rape POCSO case
Rape and POCSO case in the state

ಇನ್ನು, ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯ ಪ್ರಕಾರ, ಬಿಜೆಪಿಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸುತ್ತಿರುವ ಅತಿ ಹೆಚ್ಚು ಸಂಸದರು ಮತ್ತು ಶಾಸಕರು ಇದ್ದಾರೆ.

Advertisement

ಪಕ್ಷವು ಅಂತಹ 54 ಶಾಸಕರನ್ನು ಹೊಂದಿದ್ದು, ಅವರಲ್ಲಿ 5 ಮಂದಿ ಅತ್ಯಾಚಾರಕ್ಕೆ ಸಂಬಂಧಿಸಿದ ಘೋಷಿತ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ 23, ಟಿಡಿಪಿ 17, ಎಎಪಿ 13 ಮತ್ತು ಇತರರು ಅದರ ನಂತರದ ಸ್ಥಾನಗಳಲ್ಲಿದ್ದಾರೆ.

https://vijayaprabha.com/actress-padmaja-rao-jailed-for-three-months/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement