Rape and POCSO case: ಈ ವರ್ಷದ ಜನವರಿಯಿಂದ ಜುಲೈವರೆಗೆ ರಾಜ್ಯದಲ್ಲಿ 340 ಅತ್ಯಾಚಾರ (Rape case) ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 234 ಅತ್ಯಾಚಾರ ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದರೆ, 106 ಪ್ರಕರಣಗಳ ವಿಚಾರಣೆ ಇನ್ನೂ ಆಗಬೇಕಿದೆ.
ಹೌದು, ಈ ವರ್ಷದ ಜುಲೈವರೆಗೆ ದಾಖಲಾದ ಒಟ್ಟು 2,089 ಪೋಕ್ಸೊ ಪ್ರಕರಣಗಳ ( POCSO case) ಪೈಕಿ 1,015 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದರೆ 1,074 ಪ್ರಕರಣಗಳ ವಿಚಾರಣೆ ಬಾಕಿ ಇದೆ. ಉಳಿದಂತೆ, 3,643 ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರ ಮೇಲಿನ ಪ್ರಕರಣವೂ ಕೂಡ ಒಂದು
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಹೊಂದಿರುವ ಹೆಚ್ಚಿನ ಸಂಸದರು, ಶಾಸಕರು ಯಾವ ಪಕ್ಷಗಳಲ್ಲಿದ್ದಾರೆ?
ಇನ್ನು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯ ಪ್ರಕಾರ, ಬಿಜೆಪಿಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸುತ್ತಿರುವ ಅತಿ ಹೆಚ್ಚು ಸಂಸದರು ಮತ್ತು ಶಾಸಕರು ಇದ್ದಾರೆ.
ಪಕ್ಷವು ಅಂತಹ 54 ಶಾಸಕರನ್ನು ಹೊಂದಿದ್ದು, ಅವರಲ್ಲಿ 5 ಮಂದಿ ಅತ್ಯಾಚಾರಕ್ಕೆ ಸಂಬಂಧಿಸಿದ ಘೋಷಿತ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ 23, ಟಿಡಿಪಿ 17, ಎಎಪಿ 13 ಮತ್ತು ಇತರರು ಅದರ ನಂತರದ ಸ್ಥಾನಗಳಲ್ಲಿದ್ದಾರೆ.
https://vijayaprabha.com/actress-padmaja-rao-jailed-for-three-months/