ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯಲು ಪ್ರಮುಖವಾಗಿ ರೇಷನ್ ಕಾರ್ಡ್ ಮುಖ್ಯವಾಗಿದೆ. ಅಲ್ಲದೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಬಹುಮುಖ್ಯವಾಗಿ ರೇಷನ್ ಕಾರ್ಡ್ ಬೇಕೆಬೇಕು. ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗಾಗಿ ಈ ಹಿಂದೆ ನೀಡಿರುವವರಿಗೆ ಇದೀಗ ಸಿಹಿ ಸುದ್ದಿ ಆಹಾರ ಇಲಾಖೆ ನೀಡಿದೆ.
ಹೌದು, ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದೆ. ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು. ಹೇಗೆ ಪರಿಶೀಲಿಸುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
* ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
* ಮೆನು ಪಟ್ಟಿಯಲ್ಲಿ e-Services ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
* e-Ration card ಲಿಂಕ್ ಮೇಲೆ ಕ್ಲಿಕ್ ಮಾಡಿ.
* Village list ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
* ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತ್, ಗ್ರಾಮ ಮಾಹಿತಿ ಭರ್ತಿ ಮಾಡಿ ಗೋ ಬಟನ್ ಕ್ಲಿಕ್ ಮಾಡಿ.
ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.