(ration card-:) ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಹೊಸ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ 1.73 ಲಕ್ಷ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು. 2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಿಪಿಎಲ್ ಕಾರ್ಡ್ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ ಎಂದರು.
ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್:
ಮಾಹಿತಿಯ ಪ್ರಕಾರ ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಬಾಗಲಕೋಟೆ, ಹಾವೇರಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ಮೊದಲು ರೇಷನ್ ಕಾರ್ಡ್ ಅನ್ನು ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಆದರೆ, ರೇಷನ್ ಕಾರ್ಡ್ ವಿತರಣೆ ಆರಂಭ ಆದ ನಂತರ ಯಾವ ಜಿಲ್ಲೆಗೆ ಮೊದಲು ಎಂದು ತಿಳಿಯುತ್ತದೆ.