(RATION CARD) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅಲ್ಲದೆ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಆದರೆ, ನಕಲಿ ದಾಖಲೆ ನೀಡಿ ರೇಷನ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ.
ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರು ಸಿಕ್ಕಿಬಿದ್ದರೆ ದಂಡದ ಜೊತೆಗೆ ಕಾನೂನು ಕ್ರಮ ಎದುರಿಸಬೇಕು. ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು.
ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 97,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊಂದಿರುವವರು, 4,036 ಮಂದಿ ಸರ್ಕಾರಿ ನ04ರರಿರುವುದು ಪತ್ತೆಯಾಗಿದೆ.