‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’- ರಿಷಬ್ ಶೆಟ್ಟಿ ಆಕ್ರೋಶ

ಬೆಂಗಳೂರು: ಭಾರತ ವಿರೋಧಿ ಕತೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವ ಬಾಲಿವುಡ್ ಮಂದಿಗೆ ಸ್ಯಾಂಡಲ್ ವುಡ್ ನ ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ಅವರು ಕ್ಲಾಸ್ ತೆಗೆದುಕೊಂಡಿದ್ದು, ಹಿಂದಿ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ…

RISHAB SHETTY

ಬೆಂಗಳೂರು: ಭಾರತ ವಿರೋಧಿ ಕತೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವ ಬಾಲಿವುಡ್ ಮಂದಿಗೆ ಸ್ಯಾಂಡಲ್ ವುಡ್ ನ ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ಅವರು ಕ್ಲಾಸ್ ತೆಗೆದುಕೊಂಡಿದ್ದು, ಹಿಂದಿ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಮಾಡೋ ಆರ್ಟ್ಸ್ ಎಂದು ಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್‌ನಲ್ಲಿ ತೋರಿಸಬಹುದಲ್ಲ ಎಂದು ಸಲಹೆ ನೀಡಿದ್ದಾರೆ.

ಇನ್ನು ರಿಷಬ್ ಶೆಟ್ಟಿ ಅವರ ಹೇಳಿಕೆ ವೈರಲ್ ಆಗಿದ್ದು, ಅವರಿಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ರಿಷಬ್ ಸರಿಯಾಗಿ ಮಾತನಾಡಿದ್ದಾರೆ. ಎಂದಿಗೂ ನಮ್ಮ ಭಾರತದ ಸಂಸ್ಕೃತಿಯನ್ನು ಎತ್ತಿ ತೋರಿಸುವ ಸಿನಿಮಾಗಳು ಬರಬೇಕು ಎಂದು ನೆಟ್ಟಿಗರು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.