ರಾಕಿಂಗ್ ಸ್ಟಾರ್ ಅವರ ಹೊಸ ಲುಕ್; ಅಂಬಾನಿ ಮಗನ ಮದುವೆಯಲ್ಲಿ ಯಶ್ ಭಾಗಿ

ಬೆಂಗಳೂರು: ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಯಶ್ ಅವರ ಈ ಹೊಸ ಲುಕ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮುಕೇಶ್ ಅಂಬಾನಿ ಮಗನ…

ಬೆಂಗಳೂರು: ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಯಶ್ ಅವರ ಈ ಹೊಸ ಲುಕ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಮುಕೇಶ್ ಅಂಬಾನಿ ಮಗನ ಮದುವೆಗೆ ಯಶ್ ಅವರಿಗೆ ಆಮಂತ್ರಣ ಸಿಕ್ಕಿದ್ದು, ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆ ಕಾರ್ಯಕ್ರಮಕ್ಕೆ ಅವರು ಮುಂಬೈಗೆ ತೆರಳಿದ್ದಾರೆ. ಈ ವೇಳೆ ಅವರ ಮುಂದಿನ ಸಿನಿಮಾದ ಲುಕ್ ರಿವೀಲ್ ಆಗಿದ್ದು, ತಮ್ಮ ಹೊಸ ಹೇರ್ ಸ್ಟೈಲ್ ನಲ್ಲಿ ಯಶ್ ಗಮನ ಸೆಳೆದಿದ್ದಾರೆ. ಆದರೆ ಈ ಲುಕ್ ರಾಮಾಯಣ ಸಿನಿಮಾದ್ದ ಅಥವಾ ಟಾಕ್ಸಿಕ್ ಸಿನಿಮಾದ್ದ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಕೆಜಿಎಫ್‌ ಸಿನಿಮಾದ ಬಳಿಕ ಯಶ್ ಅವರಿಗೆ ದೊಡ್ಡ ಅಭಿಮಾನಿ ಬಳಗವೇ ಸೃಷ್ಟಿಯಾಗಿತ್ತು. ಇನ್ನು ʼಕೆಜಿಎಫ್‌ 2ʼ ಸಿನಿಮಾ ಕೂಡ ಕೆಜಿಎಫ್ 1 ಸಿನಿಮಾದಂತೆ ಬಾಕ್ಸ್‌ ಆಫೀಸ್ ನಲ್ಲಿ ಕೊಳ್ಳೆ ಹೊಡೆದಿತ್ತು. ಕೆಜಿಎಫ್‌ 2 ಸಿನಿಮಾದ ಬಳಿಕ ಯಶ್‌ ಅಭಿನಯದ ಟಾಕ್ಸಿಕ್ ಚಿತ್ರ ಘೋಷಣೆಯಾಗಿದೆ. ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾದ್ದಾರೆ. ಟಾಕ್ಸಿಕ್ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಇದ್ದು, ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.