ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಯಶ್ ನಟನೆಯ ಚಿತ್ರದ ವಿರುದ್ಧ ದೂರು!

ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು. ಆದರೆ ಇದೀಗ ಟಾಕ್ಸಿಕ್…

ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು.

ಆದರೆ ಇದೀಗ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಹೌದು ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಟಾಕ್ಸಿಕ್ ಚಿತ್ರಕ್ಕಾಗಿ ನಿರ್ಮಿಸಿರುವ ಬೃಹತ್ ಸೆಟ್ ನಿಂದ ಸಮಸ್ಯೆ ಎದುರಾಗಿದೆ ಎಂದು ಆರೋಪಿಸಿದ್ದಾರೆ. ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ 20 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದೆ.

ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಸೆಟ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ. ಈ ಸಂಬಂಧ ಹೈಕೋರ್ಟ್ ಟಾಕ್ಸಿಕ್ ಚಿತ್ರದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಮ್ತತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ.

Vijayaprabha Mobile App free

ಟಾಕ್ಸಿಕ್ ಚಿತ್ರದಲ್ಲಿ ಯಶ್ ಜೊತೆಗೆ ನಯನತಾರಾ, ಹುಮಾ ಖುರೇಷಿ ಸೇರಿದಂತೆ ದೊಡ್ಡ ತಾರಾಬಳಗವಿದೆ. ಯಶ್ ಗೆ ಜೋಡಿಯಾಗಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ನಟಿಸಲಿದ್ದಾರೆ. ಈ ಚಿತ್ರವನ್ನು ಮಲಯಾಳಿ ನಿರ್ದೇಶಕಿ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.