ಎಸ್ಸಿ-ಎಸ್ಟಿ ಪ್ರೋತ್ಸಾಹಧನ ಬಂದ್: ವಿದ್ಯಾರ್ಥಿಗೆ ₹50 ಲಕ್ಷ ನೀಡಲು ಸರ್ಕಾರ ನಕಾರ

ಬೆಂಗಳೂರು: ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ₹50 ಲಕ್ಷದವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ‘ಪ್ರೋತ್ಸಾಹಧನ ಯೋಜನೆ’ಯನ್ನು ಆರ್ಥಿಕ…

scholarship vijayaprabha

ಬೆಂಗಳೂರು: ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ₹50 ಲಕ್ಷದವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ‘ಪ್ರೋತ್ಸಾಹಧನ ಯೋಜನೆ’ಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್‌ ಪರೀಕ್ಷೆಯ ರ್‍ಯಾಂಕ್‌ನಿಂದ ಸರ್ಕಾರಿ ಕೋಟಾದಡಿ ಸೀಟ್ ಲಭ್ಯವಾಗದೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಾಲೇಜು ಶುಲ್ಕ ಪಾವತಿಸಲು 25 ಲಕ್ಷ ರು. ಪ್ರೋತ್ಸಾಹಧನ ನೀಡಬೇಕು. ಅಲ್ಲದೇ, ಆ ವಿದ್ಯಾರ್ಥಿ 1ನೇ ವರ್ಷದ ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕ ಪಡೆದರೆ ಪುನಃ 25 ಲಕ್ಷ ರು. ಮಂಜೂರು ಮಾಡಬೇಕು ಎಂದು ತಿಳಿಸಲಾಗಿತ್ತು. ಆದರೆ, ಈ ಆದೇಶ ಹೊರಡಿಸಿದ ಎರಡೇ ದಿನಗಳಲ್ಲಿ ಅಂದರೆ ಅ.26ರಂದು ಹಣಕಾಸು ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯೊಂದಿಗೆ ಮೆರಿಟ್ ಆಧಾರದ ಮೇಲೆ ಹಾಸ್ಟೆಲ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೂಲಸೌಕರ್ಯ ಸುಧಾರಣೆಗಾಗಿ ಅನುದಾನ ಕೋರಿರುವ ಅನೇಕ ಪ್ರಸ್ತಾವನೆಗಳು ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಈ ಕ್ರಮ ವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಗೆ ಆರ್ಥಿಕ ಇಲಾಖೆ ತಿಳಿಸಿದೆ ಎಂದು ಮೂಲಗಳಿಂದ ಖಚಿತವಾಗಿದೆ.

Vijayaprabha Mobile App free

ಮೆರಿಟ್‌ ಸೀಟು ಪಡೆದವರಿಗೆ ₹2 ಲಕ್ಷ:

ಇಲಾಖೆಯು ಹಾಲಿ ಹೊಂದಿರುವ ಯೋಜನೆಯಡಿಯಲ್ಲಿ ಕಠಿಣವಾದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳನ್ನು ಬರೆದು ಐಐಟಿ, ಐಐಎಂ, ಐಐಎಸ್ಸಿ, ಎನ್‌ಐಟಿ ಮುಂತಾದಡೆ ಸೀಟು ಪಡೆಯುವ ಪ್ರತಿಭಾನ್ವಿತರಿಗೆ ಹಾಗೂ ನೀಟ್ ಮೂಲಕ ಸರ್ಕಾರಿ ಸೀಟು ಪಡೆದು ಎಂಬಿಬಿಎಸ್ ಓದುವವರಿಗೆ 2 ಲಕ್ಷ ರು. ಪ್ರೋತ್ಸಾಹಧನ ನೀಡಲಾಗುತ್ತಿದೆ. ಹೀಗಿರುವಾಗ ಆಡಳಿತ ಮಂಡಳಿ ಕೋಟಾದವರಿಗೆ 50 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಅಸಮಂಜಸವಾಗುತ್ತದೆ ಎನ್ನುವ ಕಾರಣಕ್ಕೆ ಆರ್ಥಿಕ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.