(U-Go Scholarship) ವೃತ್ತಿಪರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ಯು-ಗೋ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಯು-ಗೋ ಸ್ಕಾಲರ್ಶಿಪ್ ವೃತ್ತಿಪರ ಪದವಿ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಯುವತಿಯರನ್ನು ಆರ್ಥಿಕವಾಗಿ ಬೆಂಬಲಿಸಲು ಯು-ಗೋನಿಂದ ಸಿಎಸ್ ಆರ್ ಉಪಕ್ರಮವಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಭಾರತದಲ್ಲಿ ಟೀಚಿಂಗ್, ನರ್ಸಿಂಗ್, ಫಾರ್ಮಸಿ, ಮೆಡಿಸಿನ್, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಲಾ ಇತ್ಯಾದಿ ವೃತ್ತಿಪರ ಪದವಿ ಕೋರ್ಸ್ಗಳ ಮೊದಲ ವರ್ಷವನ್ನು ಅಭ್ಯಾಸ ಮಾಡುತ್ತಿರುವ ಯುವತಿಯರಿಗೆ ಲಭ್ಯವಿದೆ.
* ಅರ್ಜಿದಾರರು ತಮ್ಮ 10 ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ 70% ಅಂಕಗಳನ್ನು ಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.5ಲಕ್ಷಕ್ಕಿಂತ ಕಡಿಮೆ ಇರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
60,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/UGO3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
30-09-2024