(Santoor Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಸಂತೂರ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂತೂರ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25, ಆಂಧ್ರ ಪ್ರದೇಶ, ಕರ್ನಾಟಕ, ತೆಲಂಗಾಣ ಅಥವಾ ಛತ್ತೀಸ್ಗಢ ರಾಜ್ಯಗಳ ಹಿಂದುಳಿದ ಹಿನ್ನೆಲೆಗೆ ಸೇರಿದ ಯುವತಿಯರ ಪದವಿಪೂರ್ವ ಅಧ್ಯಯನವನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
• ಆಂಧ್ರ ಪ್ರದೇಶ, ಕರ್ನಾಟಕ, ತೆಲಂಗಾಣ ಮತ್ತು ಛತ್ತೀಸ್ಗಢದ ನಿವಾಸಿಗಳಾಗಿರುವ, ಹಿಂದುಳಿದ ಹಿನ್ನೆಲೆಗೆ ಸೇರಿದ ಯುವತಿಯರಿಗೆ ಲಭ್ಯವಿರುತ್ತದೆ.
• ಸ್ಥಳೀಯ ಸರ್ಕಾರಿ ಶಾಲೆಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
• 2023-24ರ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆ ಅಥವಾ ಜೂನಿಯರ್ ಕಾಲೇಜಿನಿಂದ 12ನೇ ತರಗತಿಯಲ್ಲಿ ಉತೀರ್ಣರಾಗಿರಬೇಕು.
• 2024-25ರಲ್ಲಿ ಪ್ರಾರಂಭವಾಗುವ ಪೂರ್ಣಾವಧಿಯ ಪದವಿ ಕಾರ್ಯಕ್ರಮಕ್ಕೆ ದಾಖಲಾಗಿರಬೇಕು.
ಗಮನಿಸಿ:
• ಪೂರ್ಣಾವಧಿಯ ಪದವಿ ಕೋರ್ಸ್ ಕನಿಷ್ಠ 3 ವರ್ಷಗಳ ಅವಧಿಯನ್ನು ಹೊಂದಿರಬೇಕು.
• ಹ್ಯುಮಾನಿಟೀಸ್, ಲಿಬರಲ್ ಆರ್ಟ್ಸ್ ಅಂಡ್ ಸೈನ್ಸಸ್ನಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಅತ್ಯಂತ ಆಸಕ್ತರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹೆಚ್ಚು ಪ್ರೋತ್ಸಾಹಿಸಲಾಗುತ್ತದೆ.
• ಮಹತ್ವಾಕಾಂಕ್ಷೆಯ (ಹಿಂದುಳಿದ) ಜಿಲ್ಲೆಗಳಿಗೆ ಸೇರಿರುವಂತಹ ವಿದ್ಯಾರ್ಥಿಗಳಿಗೂ ಆದ್ಯತೆ ನೀಡಲಾಗುತ್ತದೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ?:
24,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/SWS7 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
(ಆನ್ಲೈನ್ ಅರ್ಜಿಗಳು ಮಾತ್ರ! ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಬಡ್ಡಿ4ಸ್ಟಡಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ www.santoorscholarship.com ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?:
23-09-2024