(MTAC Scholarship) ಖಾಸಗಿ ಅಥವಾ ಸರ್ಕಾರಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಮತ್ತು ಎಂಜಿನಿಯರಿಂಗ್ ಓದುತ್ತಿರುವ ಅಥವಾ ಹಿಂದುಳಿದ ಪದವಿಪೂರ್ವ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಮೋಹನ್ ಟಿ ಅಡ್ವಾಣಿ ಸೆಂಟೆನ್ನಿಯಲ್ ಸ್ಕಾಲರ್ಶಿಪ್ ನೀಡುತ್ತಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?:
- ಸಿವಿಲ್ ಎಂಜಿನಿಯರಿಂಗ್ ಹೊರತುಪಡಿಸಿ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಇನ್ಫಾರ್ಮೇಶನ್ ಟೆಕ್ನಾಲಜಿ (ಐಟಿ), ಕಂಪ್ಯೂಟರ್ ಸೈನ್ಸ್ (ಸಿಎಸ್) ಮತ್ತು ಸಂಬಂಧಿತ ಸ್ಟೆಮ್ ಕ್ಷೇತ್ರಗಳಲ್ಲಿ ಆರ್ಕಿಟೆಕ್ಚರ್ ಮತ್ತು ಎಂಜಿನಿಯರಿಂಗ್ ನಲ್ಲಿ ಪದವಿ ಕಾರ್ಯಕ್ರಮಕ್ಕೆ ಸೇರಿಕೊಂಡ ಮೊದಲ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
- ಅರ್ಜಿದಾರರಿಗೆ, ಪ್ರಥಮ ವರ್ಷದ ವಿದ್ಯಾರ್ಥಿಗಳಾದರೆ 10 ನೇ ತರಗತಿ ಮತ್ತು 12 ನೇ ತರಗತಿಯಲ್ಲಿ ಕನಿಷ್ಠ 80% ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳಾದರೆ 12 ನೇ ತರಗತಿಯಲ್ಲಿ ಕನಿಷ್ಠ 80% ಮತ್ತು 1 ನೇ ವರ್ಷದಲ್ಲಿ 75% ಅಂಕಗಳನ್ನು ಪಡೆದಿರಬೇಕು.
- ನಿಗದಿತ ಕಾಲೇಜುಗಳಲ್ಲಿ ದಾಖಲಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಎಲ್ಲಾ ಮೂಲಗಳಿಂದ ಅರ್ಜಿದಾರರ ವಾರ್ಷಿಕ ಕುಟುಂಬದ ಆದಾಯವು ರೂ. 6 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಎಷ್ಟು ವಿದ್ಯಾರ್ಥಿ ವೇತನ ಲಭ್ಯ:
* ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ವಿದ್ಯಾರ್ಥಿಗಳಿಗೆ:
75,000 ಅಥವಾ ವಾರ್ಷಿಕ ಶುಲ್ಕದ 50%ಡಿಪ್ಲೊಮಾ ವಿದ್ಯಾರ್ಥಿಗಳಿಗೆ:
30,000 ಅಥವಾ ವಾರ್ಷಿಕ ಶುಲ್ಕದ 75% - ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/BSFS2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-08-2024
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.