(AMP Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024 ನೇ ಸಾಲಿನ ಎಎಂಪಿ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
12ನೇ ತರಗತಿಯಲ್ಲಿ ಉತ್ತೀರ್ಣರಾದ ಮುಸ್ಲಿಂ ವಿದ್ಯಾರ್ಥಿಗಳಿಗಾಗಿ ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ಸ್ (ಎಎಂಪಿ)ನ ಉಪಕ್ರಮವಾಗಿದೆ. ಉನ್ನತ ಶಿಕ್ಷಣವನ್ನು ಅಭ್ಯಾಸ ಮಾಡುವ ಅರ್ಹ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಣಕಾಸಿನ ಸಹಕಾರವನ್ನು ನೀಡುವ ಗುರಿಯನ್ನು ಈ ಉಪಕ್ರಮವು ಹೊಂದಿದೆ. ಹೀಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
- ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಭಾರತೀಯ ಮುಸ್ಲಿಂ ನಾಗರಿಕರಿಗೆ ಲಭ್ಯವಿದೆ.
- ಅರ್ಜಿದಾರರು ಮಾನ್ಯ ಮಂಡಳಿಯಿಂದ 12 ನೇ ಅಥವಾ ಅದಕ್ಕೆ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು
- ಇಸ್ಲಾಮಿಕ್ ಕಾನೂನಿಗೆ ಅನುಗುಣವಾಗಿ ಝಕಾತ್ ಪಡೆಯಲು ಅಗತ್ಯ ಮಾನದಂಡಗಳನ್ನು ಪೂರೈಸಬೇಕು.
- ಎಷ್ಟು ಸ್ಕಾಲರ್ ಶಿಪ್ ಲಭ್ಯ:
10,000ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/AMPH4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
15-08-2024