(IAM Scholarship) 6 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಇನ್ಸ್ಪೈರ್ ಅವಾರ್ಡ್ಸ್ ಮಾನಕ್ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇನ್ಸ್ಪೈರ್ ಅವಾರ್ಡ್ಸ್ ಮಾನಕ್ ಸ್ಕಾಲರ್ ಶಿಪ್, 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ಅವಕಾಶವಾಗಿದೆ. ಇದು, ಶಾಲಾ ವಿದ್ಯಾರ್ಥಿಗಳಲ್ಲಿ ಸೃಜನಶೀಲ ಮತ್ತು ನವೀನ ಚಿಂತನೆಯನ್ನು ಹುಟ್ಟುಹಾಕುವ ಮೂಲ ಉದ್ದೇಶವನ್ನು ಹೊಂದಿದ್ದು, ಭಾರತ ಸರ್ಕಾರದ ಡಿಪಾರ್ಟ್ಮೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ (ಡಿಎಸ್ಟಿ)ಯ ಮೂಲಕ ಕಾರ್ಯಗತಗೊಳಿಸಲಾದ ಪ್ರಮುಖ ಕಾರ್ಯಕ್ರಮವಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
ಮಾನ್ಯತೆ ಪಡೆದಿರುವ ಶಾಲೆ/ಸಂಸ್ಥೆಯಲ್ಲಿ 6 ರಿಂದ 10 ನೇ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
10,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/IAMS3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?:
15-09-2024