(Scholarship nsp) ವಿಕಲಚೇತನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
2024-25ನೇ ಸಾಲಿಗೆ ನ್ಯಾಷನಲ್ ಇ-ಸ್ಕಾಲರ್ ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರೀ-ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿಗಳನ್ನು ಆಗಸ್ಟ್ 31 ರೊಳಗೆ ಹಾಗೂ ಪೋಸ್ಟ್ -ಮೆಟ್ರಿಕ್ ವಿದ್ಯಾರ್ಥಿಗಳು ಅಕ್ಟೋಬರ್ 31 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಗಳನ್ನು ನ್ಯಾಷನಲ್ ಇ-ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. (http://scholarships.gov.in)
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಣಿ ಸಂಖ್ಯೆ 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.