(KSB Scholarship) ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಅಥವಾ ಯಾವುದೇ ಪಾಲಿಟೆಕ್ನಿಕ್ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ಕೆ.ಎಸ್.ಬಿ ಸ್ಕಾಲರ್ಶಿಪ್ ಅಂಡ್ ಮೆಂಟೊರ್ಶಿಪ್ ಪ್ರೋಗ್ರಾಂ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಅಥವಾ ಯಾವುದೇ ಪಾಲಿಟೆಕ್ನಿಕ್ ಕೋರ್ಸ್ ನ ಮೊದಲ ವರ್ಷದಲ್ಲಿರುವ ವಿದ್ಯಾರ್ಥಿನಿಯರಿಗೆ ತಮ್ಮ ಅಧ್ಯಯನಕ್ಕೆ ಹಣಕಾಸಿನ ನೆರವು ನೀಡಲು ಕೇರ್ ಚಾರಿಟೇಬಲ್ ಟ್ರಸ್ಟ್ನ ಮೂಲಕ ಕೆ.ಎಸ್.ಬಿ ಲಿಮಿಟೆಡ್ ಅರ್ಜಿಗಳನ್ನು ಆಹ್ವಾನಿಸುತ್ತದೆ. ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಇಲ್ಲಿದೆ ನೋಡಿ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
- ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಅಥವಾ ಯಾವುದೇ ಪಾಲಿಟೆಕ್ನಿಕ್ ಕೋರ್ಸ್ನ ಮೊದಲ ವರ್ಷದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಹರು.
- ಪುಣೆ, ನಾಸಿಕ್, ಅಹಮದ್ ನಗರ್, ಸತಾರ ಮತ್ತು ಕೊಯಮತ್ತೂರುಗಳಲ್ಲಿ ಅಥವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓದುತ್ತಿರುವ ಅಥವಾ ವಾಸವಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
- ತಮ್ಮ ಹಿಂದಿನ ತರಗತಿಯಲ್ಲಿ 60%ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ಒಟ್ಟು ರೂ.8 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಕೆಎಸ್ಬಿ ಕೇರ್ ಚಾರಿಟೇಬಲ್ ಟ್ರಸ್ಟ್ ಮತ್ತು ಬಡ್ಡಿ4ಸ್ಟಡಿ ನೌಕರರ ಮಕ್ಕಳು ಅರ್ಹರಾಗಿರುವುದಿಲ್ಲ.
- ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/KSBMP1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಎಷ್ಟು ಸ್ಕಾಲರ್ ಶಿಪ್ ಲಭ್ಯ:
25,000 - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
16-29-2024
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment