(SJF Scholarships) ಸೀತಾರಾಮ್ ಜಿಂದಾಲ್ ಫೌಂಡೇಶನ್ ವತಿಯಿಂದ ಪ್ರಥಮ ಪಿಯುಸಿ ಯಿಂದ ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
2024 ಸೀತಾರಾಮ್ ಜಿಂದಾಲ್ ಫೌಂಡೇಶನ್, 11 ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗಾಗಿ ಒಂದು ಉಪಕ್ರಮವಾಗಿದೆ. ಇದು ವಿವಿಧ ಪದವಿ / ಡಿಪ್ಲೊಮಾ ಕೋರ್ಸ್ಗಳನ್ನು ಅಧ್ಯಯನ ಮಾಡುವ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಕುರಿತು ಇಲ್ಲಿದೆ.
ಅರ್ಹತೆ ಏನಿರಬೇಕು?;
* 11, 12 ನೇ ತರಗತಿ, ಐ..ಟಿ.ಐ.(ITI), ಡಿಪ್ಲೊಮಾ, ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾವಾರು ಅವಶ್ಯಕತೆಗಳನ್ನು ಪೂರೈಸಿರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
ತಿಂಗಳಿಗೆ 3,200
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ವರ್ಷ ಪೂರ್ತಿ ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಂಚೆ ಮೂಲಕ ಈ ವಿಳಾಸಕ್ಕೆ ಕಳುಹಿಸುವುದು.
ದಿ ಟ್ರಸ್ಟಿ, ಸೀತಾರಾಮ್ ಜಿಂದಾಲ್ ಫೌಂಡೇಶನ್, ಜಿಂದಾಲ್ ನಗರ, ತುಮಕೂರು ರಸ್ತೆ, ಬೆಂಗಳೂರು – 560073
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ:
www.b4s.in/nwmd/SJS2