(IDFC FB Scholarship) ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಬಿಎ ಯಿಂದ ಮ್ಯಾನೇಜ್ಮೆಂಟ್ ನಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ವಾರ್ಷಿಕ ರೂ 6 ಲಕ್ಷಕ್ಕಿಂತ ಕಡಿಮೆ ಕುಟುಂಬದ ಆದಾಯವನ್ನು ಹೊಂದಿರುವ ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಬೆಂಬಲಿಸಲು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ನಡೆಸುತ್ತಿರುವ ಅಗತ್ಯ ಆಧಾರಿತ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದೆ.
* ಆರ್ಥಿಕ ಅಡಚಣೆಗಳಿಂದಾಗಿ ಉನ್ನತ ಅಧ್ಯಯನವನ್ನು ಮುಂದುವರಿಸಲು ಸಾಧ್ಯವಾಗದಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿಸಿನೆಸ್ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಅಧ್ಯಯನವು ಲಭ್ಯವಾಗುವಂತೆ ಮಾಡುವುದು ಈ ವಿದ್ಯಾರ್ಥಿವೇತನದ ಉದ್ದೇಶವಾಗಿದೆ.
* ಆಯ್ದ ಶಿಕ್ಷಣ ಸಂಸ್ಥೆಗಳಲ್ಲಿ 2024 ರ ತರಗತಿಗಾಗಿ 2-ವರ್ಷದ ಪೂರ್ಣಕಾಲಿಕ ಎಂಬಿಎ ಕಾರ್ಯಕ್ರಮದ ಮೊದಲ ವರ್ಷದಲ್ಲಿ ದಾಖಲಾಗಿರುವಂತಹ ಭಾರತೀಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
* ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಸಂಪರ್ಕಗೊಳಿಸಲಾದ ಮಾನ್ಯವಾದ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
2 ವರ್ಷಗಳ ಎಂಬಿಎ ಅಧ್ಯಯನಕ್ಕಾಗಿ 2 ಲಕ್ಷ (ರೂ. 1 ಲಕ್ಷ/ವರ್ಷ)
ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/IFBMS5 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-07-2024