(Nikon Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ನಿಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದು ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡಲು ಆರ್ಥಿಕವಾಗಿ ಬೆಂಬಲ ನೀಡಲು ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಉಪಕ್ರಮವಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
- 12ನೇ ತರಗತಿಯನ್ನು ಪೂರ್ಣಗೊಳಿಸಿರುವವರು ಅರ್ಹರು.
- ಮೂರು ತಿಂಗಳು ಅಥವಾ ಹೆಚ್ಚಿನ ಸಮಯದ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವವವರು ಅರ್ಹರು.
- ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿದೆ.
- ಕುಟುಂಬದ ವಾರ್ಷಿಕ ಆದಾಯವು (ಎಲ್ಲಾ ಮೂಲಗಳಿಂದ) ರೂ.6 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಎಷ್ಟು ಸ್ಕಾಲರ್ ಶಿಪ್ ಲಭ್ಯ?:
10,000ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/NIKON12 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
20-10-2024
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment