ಮಾಲೀಕರ ಮನೆಯಲ್ಲಿಯೇ ₹15 ಕೋಟಿಯ ಚಿನ್ನ, ₹41 ಲಕ್ಷ ಕಳವು ಮಾಡಿದ ಕಾವಲುಗಾರ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದಂತೆ ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಕಾವಲಿಗೆ ಇದ್ದ ನೇಪಾಳ ಮೂಲದ ಸೆಕ್ಯೂರಿಟಿ ಗಾರ್ಡ್ ₹40.80 ಲಕ್ಷ ನಗದು ಹಾಗೂ ₹14.75 ಕೋಟಿ…

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದಂತೆ ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಕಾವಲಿಗೆ ಇದ್ದ ನೇಪಾಳ ಮೂಲದ ಸೆಕ್ಯೂರಿಟಿ ಗಾರ್ಡ್ ₹40.80 ಲಕ್ಷ ನಗದು ಹಾಗೂ ₹14.75 ಕೋಟಿ ಮೌಲ್ಯದ 18 ಕೆ.ಜಿ. 470 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನಗರದ ಹೊಸಹಳ್ಳಿ ಎಕ್ಸ್‌ಟೆನ್ಷನ್ ನಿವಾಸಿ ಸುರೇಂದ್ರ ಕುಮಾರ್ ಜೈನ್ ಅವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ನೇಪಾಳ ಮೂಲದ ಸೆಕ್ಯೂರಿಟಿ ಗಾರ್ಡ್ ನಮ್ರಾಜ್ ಬಾತ ವಿರುದ್ಧ ಪ್ರಕರಣ ದಾಖಲಿಸಿ, ಆತನ ಬಂಧನಕ್ಕೆ ಶೋದ ಕಾರ್ಯ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ:

Vijayaprabha Mobile App free

ದೂರುದಾರ ಸುರೇಂದ್ರ ಕುಮಾರ್ ಜೈನ್ ಮಾಗಡಿ ರಸ್ತೆಯ ವಿದ್ಯಾರಣ್ಯನಗರದಲ್ಲಿ ಸುಮಾರು 30 ವರ್ಷಗಳಿಂದ ಅರಿಹಂತ್ ಜ್ಯುವೆಲ್ಲರಿ ಅಂಗಡಿ ಹೊಂದಿದ್ದು, ಚಿನ್ನಾಭರಣ ವ್ಯಾಪಾರ ಮಾಡುತ್ತಿದ್ದಾರೆ. ಇವರ ಜ್ಯುವೆಲ್ಲರಿ ಅಂಗಡಿಯಲ್ಲಿ 7 ಜನ ಹುಡುಗರು ಕೆಲಸ ಮಾಡಿಕೊಂಡಿದ್ದು, ಈ ಪೈಕಿ 6 ಮಂದಿ ಅವರ ಸ್ವಂತ ಮನೆಗಳಲ್ಲಿ ವಾಸವಾಗಿದ್ದಾರೆ. ಈ ಜ್ಯುವೆಲ್ಲರಿ ಅಂಗಡಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ ನೇಪಾಳ ಮೂಲದ ನಮ್ರಾಜ್‌ಗೆ ಮನೆ ಇಲ್ಲದ ಕಾರಣ ಮಾಲೀಕ ಸುರೇಂದ್ರ ಕುಮಾರ್ ಜೈನ್ ಅವರ ಮನೆಯ ಪಾರ್ಕಿಂಗ್ ಸ್ಥಳದಲ್ಲಿರುವ ಸೆಕ್ಯೂರಿಟಿ ರೂಮ್‌ನಲ್ಲಿ 6 ತಿಂಗಳಿನಿಂದ ಪತ್ನಿ ಜತೆಗೆ ವಾಸವಿದ್ದ. ಅಂತೆಯೇ ಮನೆಯ ತಾರಿಸಿಯ ಗಿಡಗಳಿಗೆ ನೀರು ಹಾಕುವುದು ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ.

ಸುರೇಂದ್ರಕುಮಾರ್ ಅವರು ದೇವರ ಜಾತ್ರೆ ಪ್ರಯುಕ್ತ ನ.1ರಂದು ಕುಟುಂಬದ ಜತೆ ಗುಜರಾತ್‌ನ ಗಿರ್ನಾರ್‌ಗೆ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ನ.7ರಂದು ಮುಂಜಾನೆ ಮನೆಗೆ ವಾಪಾಸಾದಾಗ ಕಳುವಾದ ವಿಷಯ ತಿಳಿದಿದ್ದು, ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.