‘ಮಹಿಳಾ ವೈದ್ಯಕೀಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ ಜಾರಿ’:- ಶರಣ್ ಪ್ರಕಾಶಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನುಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ ಪಾಟೀಲ್‌ ಹೇಳಿದರು. ಕೋಲ್ಕತ್ತಾ ವೈದ್ಯೆ…

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನುಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ ಪಾಟೀಲ್‌ ಹೇಳಿದರು.

ಕೋಲ್ಕತ್ತಾ ವೈದ್ಯೆ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಿನ್ನಲೆ ಇದೀಗ ಮಹಿಳಾ ವೈದ್ಯಕೀಯ ಸಿಬ್ಬಂದಿಯ ಭದ್ರತೆ ಬಗ್ಗೆ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಸುಪ್ರೀಂ ಕೋ ರ್ಟ್‌ ಸಹ ಕೆಲವು ಕ್ರಮಗಳನ್ನು ಸೂಚಿಸಿದೆ.

ಸುಪ್ರೀಂ ಕೋ ರ್ಟ್‌ ಸೂಚನೆಯ ಭಾಗವಾಗಿ ಕ್ರಮಕ್ಕೆ ಮುಂದಾಗಿರುವ ವೈದ್ಯಕೀಯ ಶಿಕ್ಷಣ ಇಲಾಖೆಯು, ಸಚಿವರ ನೇ ತೃತ್ವದಲ್ಲಿ ಈ ಹಿಂದೆ ಸಭೆ ನಡೆಸಿತ್ತು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಎರಡನೇ ಸಭೆಯಲ್ಲಿ, ಸುರಕ್ಷತೆಗೆ ಸರ್ಕಾರ ತೆಗೆದುಕೊಳ್ಳಬಹುದಾದ ವಿವಿಧ ಕ್ರಮಗಳನ್ನು ಅಧಿಕಾರಿಗಳು ವಿವರಿಸಿದರು.

Vijayaprabha Mobile App free

ಎಲ್ಲ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲನ್ನು ಹೆಚ್ಚಿಸುವುದು, ಸಹಾಯವಾಣಿ ಆರಂಭ, ಮಹಿಳಾ ಸಿಬ್ಬಂ ದಿ ಮತ್ತು ಪುರುಷ ಸಿಬ್ಬಂ ದಿಗೆ ಪ್ರತ್ಯೇ ಕ ವಿಶ್ರಾಂತಿ ಕೊಠಡಿ, ಮಹಿಳಾ ಸಿಬ್ಬಂದಿಗೆ ವೈಯಕ್ತಿಕ ತುರ್ತು ಅಲಾರಂ , ಸಿಸಿಟಿವಿ ಕಣ್ಗಾವಲು ಮತ್ತು ತುರ್ತು ಅಲಾರಂ ಮೇಲ್ವಿಚಾರಣೆಗೆ ನಿವೃತ್ತ ಸೈನಿಕರನ್ನು ಒಳಗೊಂಡ ನಿಯಂತ್ರಣ ಕೊಠಡಿ ಸ್ಥಾಪನೆಯ ಪ್ರಸ್ತಾವಗಳನ್ನು ಅಧಿಕಾರಿಗಳು ಸಭೆಯ ಮುಂದೆ ಇರಿಸಿದರು.ಅವುಗಳನ್ನು ಪರಿಸೀಲಿಸಿದ ಸಚಿವರು, ‘ಭದ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಮಿತಿ ರಚಿಸಲಾಗುವುದು ಎಂದು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.