ಮೈಸೂರು : ಮುಡಾ ಪ್ರಕರಣದ ವಿರುದ್ಧ ವಿಪಕ್ಷಗಳು ಪಾದಯಾತ್ರೆ ಮಾಡುತ್ತಿವೆ. ಇದಕ್ಕೆ ಕೌಂಟರ್ ನೀಡುವಂತೆ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಮೈಸೂರಿನ ಅರಮನೆ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ. ಆದರೆ ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ವಿರೋಧ ಪಕ್ಷಗಳು ದಾಖಲೆ ಸಹಿತ ಯಾವುದೇ ಚರ್ಚೆ ನಡೆಸಿಲ್ಲ. ವಾಲ್ಮೀಕಿ ನಿಗಮದಲ್ಲಿ 84 ಕೋಟಿ 63, ಅವ್ಯವಹಾರ ನಡೆದಿದೆ ಎಂದು ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ವಾಲ್ಮೀಕಿ ನಿಗಮದ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಈಗ ಎಸ್‌ಐಟಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ನನ್ನ ಪಾತ್ರ ಇಲ್ಲ ಅಂತ ಗೊತ್ತಾದ ಬಳಿಕ ಈಗ ಮುಡಾದಲ್ಲಿ ಹಗರಣ ಆಗಿದೆ ಅಂತ ಹೇಳುತ್ತಿದ್ದಾರೆ. ಮುಡಾದಲ್ಲಿ ನಾನು ಭ್ರಷ್ಟಾಚಾರ ಮಾಡಿಲ್ಲ. ನನ್ನ ಪಾತ್ರವೂ ಇಲ್ಲ. ವಿಜಯೇಂದ್ರ, ಕುಮಾರಸ್ವಾಮಿ, ಯಡಿಯೂರಪ್ಪಗೆ ನನ್ನ ರಾಜೀನಾಮೆ ಕೇಳಲು ಇವರಿಗೆ ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.
ಮುಡಾದಲ್ಲಿ ಭ್ರಷ್ಟಾಚಾರ ಆಗದೆ ಅಂತ ಬೊಂಬೆ ಹೊಡೆಯುತ್ತಿದ್ದಾರೆ. ಬಿಜೆಪಿಯವರು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜುಲೈ 26ರಂದು ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಅಂದು ರಾತ್ರಿ 10 ಗಂಟೆಗೆ ರಾಜ್ಯಪಾಲರು ನನಗೆ ನೋಟಿಸ್ ಕೊಟ್ಟಿದ್ದಾರೆ. ಜುಲೈ 29ರಂದು ರಾಜ್ಯಪಾಲರು ಶೋಕಾಸ್ ನೋಟಿಸ್ ಗೆ ಸ್ಪಷ್ಟನೆ ಕೇಳಿದ್ದಾರೆ. ಟಿಜೆ ಅಬ್ರಹಾಂನಿಗೆ ಸುಪ್ರೀಂ ಕೋರ್ಟ್ 25 ಲಕ್ಷ ರೂಪಾಯಿ ದಂಡ ವಿಧಿಸಿತ್ತು ಎಂದು ಅಬ್ರಹಾಂ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.