ಮುಂಬೈ: ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ಅವರು ಇಂದು ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 400 ವರ್ಷಗಳ ಹಿಂದಿನ ವನಪರ್ತಿ ಪುರಾತನ ದೇವಸ್ಥಾನದಲ್ಲಿ ಇವರಿಬ್ಬರು ಸಪ್ತಪದಿ ತುಳಿದಿದ್ದಾರೆ.
ಈ ಜೋಡಿ ತಮ್ಮ ವಿವಾಹದ ಸಂಭ್ರಮದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ನೀವೇ ನನ್ನ ಸೂರ್ಯ, ನೀವೇ ನನ್ನ ಚಂದ್ರ ಮತ್ತು ನನ್ನ ಎಲ್ಲಾ ನಕ್ಷತ್ರಗಳು ಎಂದು ಬರೆದುಕೊಂಡಿದ್ದಾರೆ. ಇನ್ನು ನಟಿ ಶಾಶ್ವತ ಪ್ರೀತಿ, ಬೆಳಕು, ಮ್ಯಾಜಿಕ್ ಪ್ರಾರಂಭ ಎಂದು ಪೋಸ್ಟ್ ಮಾಡಿದ್ದಾರೆ.
ಸಿದ್ಧಾರ್ಥ್ ಹಾಗೂ ಅದಿತಿ ಇವರಿಬ್ಬರಿಗೂ ಇದು 2ನೇ ಮದುವೆಯಾಗಿದೆ. ಇವರಿಬ್ಬರು ಸಿನಿಮಾವೊಂದರ ಚಿತ್ರೀಕರಣದಲ್ಲಿ ಪರಿಚಯವಾಗಿದ್ದು, ಹಲವು ವರ್ಷಗಳ ಪ್ರೀತಿಗೆ ಇಂದು ಮದುವೆ ಎಂಬ ಮುನ್ನುಡಿ ಬರೆದಿದ್ದಾರೆ. ಇನ್ನು ನವ ಜೋಡಿಗೆ ಸಿನಿಮಾ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭ ಕೋರಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment