ಮಥುರಾ: 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮದೇ ತರಗತಿಯ ಶಿಕ್ಷಕಿ ಸ್ನಾನ ಮಾಡುತ್ತಿರುವ ವೀಡಿಯೊವನ್ನು ರಹಸ್ಯವಾಗಿ ರೆಕಾರ್ಡ್ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮಥುರಾದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.
ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರು ರಜಾದಿನಗಳಲ್ಲಿ ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಟ್ಯೂಷನ್‌ಗೆ ಕರೆದು, ಸ್ನಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್‌ನಲ್ಲಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾನೆ.
ಶಿಕ್ಷಕಿ ಸ್ನಾನ ಮಾಡುತ್ತಿದ್ದಾಗ ಅಶ್ಲೀಲ ವೀಡಿಯೊ ತೆಗೆದುಕೊಂಡಿದ್ದಲ್ಲದೆ, ಸೆಕ್ಸ್ ಗೆ ಆಹ್ವಾನಿಸುವ ಮೂಲಕ ಶಿಕ್ಷಕಿಗೆ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಒಪ್ಪದ ಹಿನ್ನೆಲೆ ಶಿಕ್ಷಕಿಯ ವೀಡಿಯೋವನ್ನು ಮೂವರು ವಾಟ್ಸಾಪ್ ಮತ್ತು ಇನ್ಸಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಇದರಿಂದ ಮನನೊಂದ ಶಿಕ್ಷಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿಕ್ಷಕಿಯ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ.