Subsidy for spinal cord disabled: ನಿಮ್ಮ ಮನೆಯಲ್ಲಿ ಯಾರಾದರೂ ಬೆನ್ನುಹುರಿ ಅಪಘಾತದ ಅಂಗವಿಕಲರು, ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳಿದ್ದರೆ ಎದೆಗುಂದಬೇಡಿ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ.
ಹೌದು, ಅವರ ಆರೈಕೆದಾರರಿಗೆ ರಾಜ್ಯ ಸರ್ಕಾರ ಸಹಾಯ ಹಸ್ತ ನೀಡುತ್ತಿದ್ದು, ಪ್ರತಿ ತಿಂಗಳು ₹1,000 ಪ್ರೋತ್ಸಾಹಧನ ನೀಡುವ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ. ಆದರೆ ಸರ್ಕಾರ ಇದಕ್ಕೆ ಕೆಲ ನಿಬಂಧನೆಗಳನ್ನೂ ಸಹ ವಿಧಿಸಿದೆ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ.!
ಪ್ರೋತ್ಸಾಹಧನ ಪಡೆಯಲು ಮಾರ್ಗಸೂಚಿ
- ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID CARD).
- ಅಂಗವಿಕಲತೆಯ ಪ್ರಮಾಣ ಶೇ.75 ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು.
- ವಯಸ್ಸಿನ ಮಿತಿ ಇಲ್ಲ, ಆದಾಯದ ಮಿತಿ ಇಲ್ಲ.
- ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
- ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಯ ಆರೈಕೆದಾರರ ಬ್ಯಾಂಕ್/ಅಂಚೆ ಕಚೇರಿ ಉಳಿತಾಯ ಖಾತೆಗೆ ಪ್ರೋತ್ಸಾಹಧನ ಜಮಾ ಮಾಡಲಾಗುವುದು.
- ವಿಕಲಚೇತನ ಫಲಾನುಭವಿ ಮರಣ ಹೊಂದಿದಲ್ಲಿ ಪ್ರೋತ್ಸಾಹಧನ ಮಂಜೂರಾತಿ ತಂತಾನೇ ರದ್ದಾಗುವುದು.
ಇದನ್ನು ಓದಿ: ಡೆಂಗ್ಯೂ ಕಡ್ಡಾಯ ಪರೀಕ್ಷೆಗೆ ಸೂಚನೆ; ಮಕ್ಕಳಲ್ಲಿ ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ..!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment