ಆಂಧ್ರಪ್ರದೇಶ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಪಾದೇವಿ ಅವರನ್ನು ಮೇಡಿಪಲ್ಲಿ ಸತ್ಯಂ 12 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ರೂಪಾದೇವಿ ಮೇಡ್ಚಲ್ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ಒಂದು ವರ್ಷದಿಂದ ಕೊಂಪಲ್ಲಿ ಪೇಟ್ ಬಶೀರಾಬಾದ್‌ನ ದವೇರಿಯಾ ವಿಲ್ಲಾಸ್‌ನಲ್ಲಿ ನೆಲೆಸಿದ್ದರು. ಆದರೆ, ಒಂದು ತಿಂಗಳ ಹಿಂದೆಯಷ್ಟೇ ಹೈದರಾಬಾದ್‌ನ ಅಲ್ವಾಲ್‌ನ ಪಂಚಶೀಲಾ ಕಾಲೋನಿ ರಸ್ತೆ ಸಂಖ್ಯೆ 12ಕ್ಕೆ ಸ್ಥಳಾಂತರಗೊಂಡಿದ್ದಾರೆ. ಸತ್ಯಂ-ರೂಪಾದೇವಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಗ ಯೋಜಿತ್ (11) ಮತ್ತು ಮಗಳು ರಿಷಿಕಾ ಶ್ರೀ (9). ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ
ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ರೂಪಾದೇವಿ ವೀಡಿಯೋ ಕಾಲ್ ಮಾಡಿ ಶಾಸಕ ಸತ್ಯಂಗೆ ತಾನು ಸಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ತಕ್ಷಣ ಚೊಪ್ಪದಂಡಿಯಿಂದ ಕಾರಿನಲ್ಲಿ ಹೈದರಾಬಾದ್ ಗೆ ಹೊರಟುಬಂದಿದ್ದಾರೆ. ಆದರೆ ಅಲ್ವಾಲ್ ತಲುಪಿದಾಗ ರೂಪಾದೇವಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವು ಕಂಡುಬಂದಿದೆ. ಕೂಡಲೇ ಆಕೆಯನ್ನು ಮನೆ ಸಮೀಪದ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಪತ್ನಿಯ ಸಾವನ್ನು ಸಹಿಸಲಾಗದೆ ಶಾಸಕ ಸತ್ಯಂ ಆಸ್ಪತ್ರೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.