ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಮಾಡಲಾಗಿದೆ. ಈಗಾಗಲೇ ಬಂಧನವಾಗಿರುವ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು…

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಮಾಡಲಾಗಿದೆ. ಈಗಾಗಲೇ ಬಂಧನವಾಗಿರುವ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಸೂರಜ್ ರೇವಣ್ಣ ಬಂಧನವಾದ ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಬಿ.ಪಿ, ಶುಗರ್ ಮತ್ತು ಇತರ ಸಂಬಂಧಪಟ್ಟ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಹಾಸನದ ಸೆನ್ ಪೊಲೀಸ್ ಠಾಣೆಗೆ ಕರೆತರಲಾಗಿದೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಅವರ ಸಹೋದರ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಸೂರಜ್‌ ರೇವಣ್ಣ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಹಾಸನದಲ್ಲಿ ಸೂರಜ್‌ನನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಸೂರಜ್ ರೇವಣ್ಣ ಸಾಕ್ಷಿ ನೀಡಲು ಠಾಣೆಗೆ ಬಂದ ವೇಳೆ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.