ನಟ ಸುಶಾಂತ್ ಸಿಂಗ್ ಕೇಸ್: ಆರೋಪಿಯನ್ನ ನಿರಪರಾಧಿ ಎಂದು ತೀರ್ಪು ನೀಡಿದ ಕೋರ್ಟ್

ಮುಂಬೈ:  ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಕಾರಣ ಆಗಿದೆ ಎನ್ನಲಾದ ಡ್ರಗ್ ಕೇಸ್‌ನ ಪ್ರಮುಖ ಆರೋಪಿಯಾಗಿದ್ದ ಆಸ್ಟ್ರೇಲಿಯಾದ ವ್ಯಕ್ತಿಯನ್ನು ಸರಿಯಾದ ರೀತಿಯ ದಾಖಲೆಗಳು ಇಲ್ಲದ ಕಾರಣ ನಿರಪರಾಧಿ ಎಂದು ಕೋರ್ಟ್ ತೀರ್ಪು…

ಮುಂಬೈ:  ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಕಾರಣ ಆಗಿದೆ ಎನ್ನಲಾದ ಡ್ರಗ್ ಕೇಸ್‌ನ ಪ್ರಮುಖ ಆರೋಪಿಯಾಗಿದ್ದ ಆಸ್ಟ್ರೇಲಿಯಾದ ವ್ಯಕ್ತಿಯನ್ನು ಸರಿಯಾದ ರೀತಿಯ ದಾಖಲೆಗಳು ಇಲ್ಲದ ಕಾರಣ ನಿರಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ಅವರು ಮೃತಪಟ್ಟು ಕೆಲ ವರ್ಷಗಳೇ ಕಳೆದಿದ್ದು, ಅವರ ಸಾವಿನ ಪ್ರಕರಣ ಇನ್ನು ಬಗೆಹರಿಯದೇ ಹಾಗೇ ಉಳಿದಿದೆ. ಇದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಹೀಗಾಗಿ ಇದನ್ನು ಹೈ ಪ್ರಾಫೈಲ್ ಕೇಸ್ ಎಂದು ಪರಿಗಣಿಸಲಾಗಿದ್ದು.

ಪ್ರಕರಣದ ತನಿಖೆ ವೇಳೆ ಡ್ರಗ್ ವಿಷಯವು ಬೆಳಕಿಗೆ ಬಂದಿತ್ತು. ಮಾದಕ ವಸ್ತು ನಿಯಂತ್ರಣ ಮಂಡಳಿ ಈ ಪ್ರಕರಣದ ತನಿಖೆ ಆರಂಭಿಸಿದೆ. ಈ ಪ್ರಕರಣದಲ್ಲಿ ಆಸ್ಟ್ರೇಲಿಯಾದ ಬ್ಯಾರಟೆಲ್ಸ್ ಎಂಬಾತನನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಮಹೇಶ್ ಜಾಧವನ್ ಅವರು ಬ್ಯಾರಟೆಲ್ಸ್ ಅವರು ಅಪರಾಧಿ ಎಂಬುದನ್ನು ಸಾಬೀತು ಮಾಡಲು ಯಾವುದೇ ದಾಖಲೆಗಳು ಇಲ್ಲ. ಹೀಗಾಗಿ, ಅವರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ತೀರ್ಪು ನೀಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.