ವಾಹನ ಖರೀದಿಸುವವರಿಗೆ ಸುವರ್ಣಾವಕಾಶ: `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ಅಜರ್ಿ ಸಲ್ಲಿಸುವಾಗ ಅಜರ್ಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅಜರ್ಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

Advertisement

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅಜರ್ಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅಜರ್ಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅಜರ್ಿದಾರರು ಅಜರ್ಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕನರ್ಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪಕರ್ಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪಕರ್ಿಸಬಹುದು. ಆನ್ಲೈನ್ ಮೂಲಕ ಭತರ್ಿ ಮಾಡಿದ ಅಜರ್ಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು