ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂತೆರೋ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಇದೇ ಸೆಪ್ಟೆಂಬರ್ 1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೆ ತರುಣ್ ಸುಧೀರ್ ಮತ್ತು ನಟಿ ಸೋನಲ್ ಜೋಡಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದರು. ನಟಿ ಸೋನಲ್ ಅವರು ಕ್ರೈಸ್ತ ಧರ್ಮದವರಾಗಿದ್ದು, ಇದೀಗ ಅವರ ಸಂಪ್ರದಾಯದಂತೆ ಸೆ.1ರಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ ವಿವಾಹ ನಡೆಯಲಿದೆ.
ಇನ್ನು ಮದುವೆಯೊಂದಿಗೆ ಆರತಕ್ಷತೆ ಕೂಡ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ಕುಟುಂಬಸ್ಥರನ್ನ, ಆಪ್ತರನ್ನಷ್ಟೇ ಆಹ್ವಾನಿಸಲಾಗಿದೆ.
ಇದೇ ಆಗಸ್ಟ್ 11ರಂದು ಹಿಂದೂ ಸಂಪ್ರದಾಯದಂತೆ ತರುಣ್ ಹಾಗೂ ಸೋನಲ್ ಬೆಂಗಳೂರಿನಲ್ಲಿ ಮದುವೆಯಾಗಿದ್ದರು. ಈ ಮದುವೆಗೆ ಸ್ಯಾಂಡಲ್ ವುಡ್ ನ ಅನೇಕ ನಟ, ನಟಿಯರು ಆಗಮಿಸಿ ಈ ಜೋಡಿಗೆ ಆಶೀರ್ವದಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment