ಟಿಇಟಿ ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ: ಇಲ್ಲಿದೆ ಲಿಂಕ್

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ಜೂ.30ರಂದು ನಡೆಸಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ-2024) ಪ್ರವೇಶ ಪತ್ರಗಳನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಯು ಜೂ.30ರಂದು ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಪತ್ರಿಕೆ-1 ಮತ್ತು…

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ಜೂ.30ರಂದು ನಡೆಸಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ-2024) ಪ್ರವೇಶ ಪತ್ರಗಳನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಪರೀಕ್ಷೆಯು ಜೂ.30ರಂದು ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಪತ್ರಿಕೆ-1 ಮತ್ತು 2 ನಡೆಯಲಿದೆ.

ಪ್ರವೇಶ ಪತ್ರಗಳನ್ನು ಜೂ.20ರಿಂದ ಇಲಾಖೆ ವೆಬ್‌ಸೈಟ್ http://schooleducation.karnataka.gov.in/ ನಲ್ಲಿ ಲಭ್ಯವಾಗಲಿದೆ. ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

Vijayaprabha Mobile App free

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅದರಂತೆ ಸಿದ್ಧತೆಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. ಆಯಾ ಜಿಲ್ಲೆಯ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಒಳಗೊಂಡ ಪಟ್ಟಿಯನ್ನೂ ಸಹ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.