ಮಾದಪ್ಪನ ಬೆಟ್ಟದಲ್ಲಿ ಮಹಾ ರಥೋತ್ಸವ: ಲಕ್ಷಾಂತರ ಭಕ್ತರಿಂದ ಸ್ವಾಮಿಯ ದರ್ಶನ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವ ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮಹಾರಥೋತ್ಸವ ಜರುಗಿತು. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ದೀಪಾವಳಿ…

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವ ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮಹಾರಥೋತ್ಸವ ಜರುಗಿತು.

ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ದೀಪಾವಳಿ ಪ್ರಯುಕ್ತ ಕಳೆದ 5 ದಿನಗಳಿಂದ ಜಾತ್ರಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಶನಿವಾರ ರಥೋತ್ಸವ ಸಂಭ್ರಮದಿಂದ ನಡೆಯಿತು.

ದೀಪಾವಳಿ ಮಹಾರಥೋತ್ಸವಕ್ಕೂ ಮುನ್ನ ಬೆಳಿಗ್ಗೆ 7 ಗಂಟೆಗೆ ಕೆಂಪು ಅನ್ನ ತಯಾರಿಸಿ (ಬಲಿ ಅನ್ನ) ಮಲೆ ಮಹದೇಶ್ವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ನಂತರ ಬೇಡರ ಸ್ವಾಮಿಗಳ ನೇತೃತ್ವದಲ್ಲಿ ರಥಕ್ಕೆ ಪೂಜೆ ಸಲ್ಲಿಸಿ ರಥದ ಚಕ್ರಗಳಿಗೆ ಬಲಿ ಅನ್ನ ಇಟ್ಟು ನಂತರ ಮಹಾ ಮಂಗಳಾರತಿ ಪೂಜೆ ಸಲ್ಲಿಸಿ ಬೆಲ್ಲದ ಆರತಿ ನಂತರ ಬೂದಕುಂಬಳಕಾಯಿ ಒಡೆದು, ಬಳಿಕ ಸ್ವಾಮೀಜಿಗಳು ತೆಂಗಿನಕಾಯಿ ಒಡೆಯುವ ಮೂಲಕ ಮಹಾರಥೋತ್ಸವಕ್ಕೆ ಬೇಡಗಂಪಣ ಸಮುದಾಯದ ಹೆಣ್ಣುಮಕ್ಕಳಿಂದ ಬೆಲ್ಲದ ಆರತಿ ಬೆಳಗಿನ ನಂತರ ಚಾಲನೆ ನೀಡಲಾಯಿತು.

Vijayaprabha Mobile App free

ಮಹಾ ರಥೋತ್ಸವ ನಂತರ ಪಾರ್ವತಿ ಪರಮೇಶ್ವರರ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಸುತ್ತಲೂ ವಾದ್ಯಗಳೊಂದಿಗೆ ಪ್ರದಕ್ಷಣೆ ಹಾಕಿ ಉತ್ಸವ ಮೂರ್ತಿಯನ್ನು ಪೂಜೆ ಸಲ್ಲಿಸಿ ಮಹಾ ಮಂಗಳಾರತಿಯೊಂದಿಗೆ ಪೂಜೆಯ ನಂತರ ಬಿಳಿ ಆನೆ ಉತ್ಸವ ನಡೆಯಿತು.

ಉತ್ಸವಮೂರ್ತಿಗೆ ಧೂಪದ ಅಭಿಷೇಕ ಬಿಲ್ವಾರ್ಚನೆ, ಅಭಿಷೇಕ ಮಹಾಮಂಗಳಾರತಿ ನಂತರ ವಿಶೇಷ ಪೂಜೆ ಸಲ್ಲಿಸುವ ಈ ಸನ್ನಿವೇಶವನ್ನು ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಮಾದಪ್ಪನ ಭಕ್ತರು ಕಣ್ತುಂಬಿಕೊಂಡರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.