ಹೆಣ್ಣು ಕೊಟ್ಟ ಮಾವನ ಮನೆಯ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಳಿಯ 

ಉತ್ತರ ಕನ್ನಡ: ಅಳಿಯನೊಬ್ಬ ತನಗೆ ಹೆಣ್ಣು ಕೊಟ್ಟ ಮಾವನ ಮನೆಯ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು, ವ್ಯಕ್ತಿಯೋರ್ವ ಪತ್ನಿಯ ತವರು ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ…

fire accident

ಉತ್ತರ ಕನ್ನಡ: ಅಳಿಯನೊಬ್ಬ ತನಗೆ ಹೆಣ್ಣು ಕೊಟ್ಟ ಮಾವನ ಮನೆಯ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೌದು, ವ್ಯಕ್ತಿಯೋರ್ವ ಪತ್ನಿಯ ತವರು ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಇಂದೂರಕೊಪ್ಪ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ (೩೫) ಎಂಬುವರೇ ಬೆಂಕಿಗಾಹುತಿಯಾದ ವ್ಯಕ್ತಿ. ದೀಪಾವಳಿ ಹಬ್ಬದ ನಿಮಿತ್ತ ಶನಿವಾರ ಬೆಂಗಳೂರಿನಿಂದ ಸ್ವಗ್ರಾಮ ನಂದಿಕಟ್ಟಾ ಗ್ರಾಮಕ್ಕೆ ಆಗಮಿಸಿದ್ದ ಈತ ಅದೇ ರಾತ್ರಿ ಪತ್ನಿಯ ತವರು ತಾಲೂಕಿನ ಇಂದೂರಕೊಪ್ಪ ಗ್ರಾಮದ ಮನೆಗೆ ತೆರಳಿ ಮಾವನ ಮನೆಯ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡಿದ್ದಾನೆ.

Vijayaprabha Mobile App free

ದೀಪಾವಳಿ ನಿಮಿತ್ತ ಹಚ್ಚಿಡಲಾಗಿದ್ದ ದೀಪದಿಂದ ಬೆಂಕಿ ತಗುಲಿ ಏಕಾಏಕಿ ಹೊತ್ತಿ ಉರಿದಿದೆ. ತಕ್ಷಣ ಮನೆಯವರು ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿ, ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾನೆ. ಅರವಿಂದ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರಿ, ಓರ್ವ ಪುತ್ರ ಇದ್ದಾರೆ. ಕಳೆದ ೫ ವರ್ಷಗಳ ಹಿಂದೆ ಇಂದೂರಕೊಪ್ಪ ಗ್ರಾಮದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಈತ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಕೌಟುಂಬಿಕ ಕಲಹವೇ ಕಾರಣವಿರಬಹುದು ಎನ್ನಲಾಗುತ್ತಿದೆ. ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.