ಬೆಂಗಳೂರು: ಪ್ರಸಕ್ತ ವರ್ಷದ ಎಂಬಿಎ, ಎಂಸಿಎ, ಎಂಇ, ಎಂಟೆಕ್ ಮತ್ತು ಎಂಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸಲು ನ.8 ಕೊನೆ ದಿನವಾಗಿದ್ದು, ನ.9ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಅಣಕು ಫಲಿತಾಂಶ ನಂತರ ನ.9ರಿಂದ ಬೆಳಿಗ್ಗೆ 11ಗಂಟೆವರೆಗೆ ಅಗತ್ಯಬಿದ್ದರೆ ಆಪ್ಷನ್ ಬದಲಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ಅಂದೇ ಸಂಜೆ 6 ಗಂಟೆಗೆ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳು ಸೂಕ್ತ ಆಯ್ಕೆ ದಾಖಲಿಸಲು ನ.13ರಿಂದ 14ರವರೆಗೆ ಅವಕಾಶವಿದೆ. ಈ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿಜಿ ಆಯುಷ್-2024 ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ನ.8ರ ಮಧ್ಯಾಹ್ನ 1ಗಂಟೆವರೆಗೆ ಆಪ್ಷನ್ಸ್ ದಾಖಲಿಸಿಕೊಳ್ಳಬಹುದು. ಅಂದೇ ಸಂಜೆ 8 ಗಂಟೆಗೆ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನ.11ರ ಬೆಳಿಗ್ಗೆ 11ರವರೆಗೆ ಆಪ್ಷನ್ಸ್ ಬದಲಿಸಿಕೊಳ್ಳಲು ಅವಕಾಶವಿದೆ. ಅಂದೇ ಸಂಜೆ 6ಗಂಟೆಗೆ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಪೋಷಕರ ಜತೆ ಚರ್ಚಿಸಿ, ನ.11ರಿಂದ 12ರವರೆಗೆ ಚಾಯ್ಸ್ ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನ.14ರವರೆಗೆ ಅವಕಾಶ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.