Gold Silver Price: ಗಣೇಶ ಚತುರ್ಥಿ ಹಬ್ಬಕ್ಕೆ ಚಿನ್ನ ಖರೀದಿ ಮಾಡುವ ಯೋಚನೆಯಲ್ಲಿ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಇಂದು ಚಿನ್ನದ ಬೆಲೆಯಲ್ಲಿ (Gold price) ಭಾರೀ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆ 6,668 ಅಗಿದ್ದು. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆ 7,274 ರೂಪಾಯಿ ಆಗಿದೆ. 18 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 5,455 ರೂಪಾಯಿ ಎಂದು ತಿಳಿದು ಬಂದಿದೆ. ಚಿನ್ನ ಖರೀದಿ ಮಾಡಲು ಇದು ಸೂಕ್ತ ಸಮಯವಾಗಿದ್ದು ಹಬ್ಬದ ಸಂಭ್ರಮಕ್ಕೆ ಚಿನ್ನ ಖರೀದಿಸಬಹುದಾಗಿದೆ.
Petrol Diesel Price: ಏರಿಕೆ ಕಂಡ ಪೆಟ್ರೋಲ್ ಡೀಸೆಲ್ ಬೆಲೆ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಪೆಟ್ರೋಲ್, ಡೀಸೆಲ್ ದರ ಏರಿಕೆ ಕಂಡಿದೆ.
ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ ಇದೆ. ಹಾಗೂ ನಮ್ಮ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಡೀಸೆಲ್ ದರ 88.95 ರೂ ಹಾಗೂ ಪೆಟ್ರೋಲ್ ಬೆಲೆ 100.85 ರೂ ಇದೆ ಎಂದು ತಿಳಿದು ಬಂದಿದೆ.
https://vijayaprabha.com/actor-prem-reacts-to-darshan-case/