ಕೊಡಗು ಜಿಲ್ಲೆಯ ಕೋಟೆಬೆಟ್ಟ ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.
ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬ ಸಮೇತ ಕೋಟೆ ಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ ಕುಟಂಬದ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಮಾದಾಪುರ ಸಮೀಪದ ನಿವಾಸಿಗಳು ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.