ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಭಗ್ನ ಪ್ರೇಮಿ!

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಘಟನೆ…

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ.

ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್‌ (23) ಚಾಕು ಇರಿದ ಆರೋಪಿಯಾಗಿದ್ದಾನೆ. ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು.

ಇದನ್ನು ಸಹಿಸದ ಆದಿಲ್‌ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಹನೀಷಾ ಪ್ರೇಮ ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್‌ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.