ಉಡುಪಿ: ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ.
ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್ನನ್ನು ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದರು. ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಈ ಸಂದರ್ಭದಲ್ಲಿ ಪ್ರವೀಣ್ ಆ್ಯಂಡ್ ಟೀಂ ಏಕಾಏಕಿಯಾಗೊ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment