ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್; ವೀಡಿಯೋ ಮಾಡಿ ಅಟ್ಟಹಾಸ

ಉಡುಪಿ: ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು.…

ಉಡುಪಿ: ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ.

ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್​ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದ್ದರು. ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಈ ಸಂದರ್ಭದಲ್ಲಿ ಪ್ರವೀಣ್ ಆ್ಯಂಡ್​ ಟೀಂ ಏಕಾಏಕಿಯಾಗೊ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್​​ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.