ವಂದೇ ಭಾರತ್‌ ರೈಲು ಪ್ರಯಾಣ ದರ ಇಳಿಕೆ ಸಾಧ್ಯತೆ: ಸಚಿವ ವಿ.ಸೋಮಣ್ಣ

ಬೆಂಗಳೂರು: ವಂದೇ ಭಾರತ್‌ ರೈಲು ಸಹಿತ ಎಲ್ಲ ರೈಲುಗಳ ದರ ಪಟ್ಟಿ ಪರಿಷ್ಕರಣೆ ಮಾಡುವ ಚಿಂತನೆ ಇದೆ ಎಂದು ರೈಲ್ವೇ ಖಾತೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು…

ಬೆಂಗಳೂರು: ವಂದೇ ಭಾರತ್‌ ರೈಲು ಸಹಿತ ಎಲ್ಲ ರೈಲುಗಳ ದರ ಪಟ್ಟಿ ಪರಿಷ್ಕರಣೆ ಮಾಡುವ ಚಿಂತನೆ ಇದೆ ಎಂದು ರೈಲ್ವೇ ಖಾತೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು ಈ ಬಗ್ಗೆ ಪ್ರಧಾನಿ ಮೋದಿಯವರ ಜತೆಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಹೇಳಿದರು.

ಕನ್ನಡದವರಿಗೆ ಆದ್ಯತೆ ಕರ್ನಾಟಕದಲ್ಲಿರುವ ರೈಲ್ವೇ ವಿಭಾಗ ಗಳಲ್ಲಿ ಕೆಲಸ ಮಾಡಲು ಕನ್ನಡದವರಿಗೆ ಆದ್ಯತೆ ನೀಡಲಾಗುತ್ತದೆ. ನಮ್ಮಲ್ಲಿ ಪರ ರಾಜ್ಯದವರು ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿ. ಸೋಮಣ್ಣ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಾಗುತ್ತಿದೆ ಎಂದರು. 49 ಕಾಮಗಾರಿ, 1,699 ಕೋ.ರೂ. ಪ್ರಸ್ತುತ ರೈಲ್ವೇ ಇಲಾಖೆಯಿಂದ ರಾಜ್ಯ ದಲ್ಲಿ 1,699 ಕೋಟಿ ರೂ. ವೆಚ್ಚದ 93 ಆರ್‌ಒಬಿ-ಆರ್‌ಯುಬಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಇವುಗಳಲ್ಲಿ 49 ಕಾಮಗಾರಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವೆ ವೆಚ್ಚ ಹಂಚಿಕೆ ಆಧಾರದ ಮೇಲೆ ಅನುಮೋದನೆ ನೀಡಲಾಗಿದೆ. ರಾಜ್ಯದ ಪಾಲಿನ ಅನುದಾನ ಇಲ್ಲದ ಸಂದರ್ಭದಲ್ಲಿ ಭಾರತೀಯ ರೈಲ್ವೇ ಶೇ. 100ರಷ್ಟು ಧನ ಸಹಾಯದೊಂದಿಗೆ ಆರ್‌ಒಬಿ-ಆರ್‌ಯುಬಿ ಕಾಮಗಾರಿ ಮಾಡಲಾಗುತ್ತದೆ ಎಂದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.