ವಿದ್ಯಾರ್ಥಿಗಳಿಗಾಗಿಯೇ Vidyasiri Yojana ಜಾರಿ – 15,000 ರೂ ವಿದ್ಯಾರ್ಥಿ ವೇತನ; ಸೌಲಭ್ಯ ಪಡೆದುಕೊಳ್ಳುವುದು ಹೇಗೆ?

Vidyasiri Yojana : ಬಡ ಮಕ್ಕಳು, ಹಿಂದುಳಿದ ವರ್ಗದ ಮಕ್ಕಳು, ಮತ್ತು ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ…

Vidyasiri Yojana vijayaprabha news

Vidyasiri Yojana : ಬಡ ಮಕ್ಕಳು, ಹಿಂದುಳಿದ ವರ್ಗದ ಮಕ್ಕಳು, ಮತ್ತು ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತಂದಿದೆ.

ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯು ಹಾಗೂ ತತ್ಸಮಾನ ವಿದ್ಯಾರ್ಹತೆ, ಸಾಮಾನ್ಯ ಪದವಿ ಹಾಗೂ ಸಂಯೋಜಿತ ಉಭಯ ಪದವಿ ಕೋರ್ಸ್ ಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ಈ ಯೋಜನೆಯ ಸೌಲಭ್ಯ ಪಡೆಯಬಹುದು.

ಇದನ್ನೂ ಓದಿ: BPL card : ಮಾನದಂಡಗಳ ವಿರುದ್ಧವಾಗಿ ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್​ ಸೂಚನೆ

Vijayaprabha Mobile App free

Vidyasiri Yojana : ವಿದ್ಯಾಸಿರಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ರೂ. ವಿದ್ಯಾರ್ಥಿ ವೇತನ

Vidyasiri Yojana vijayaprabha news

ವಿದ್ಯಾಸಿರಿ ಯೋಜನೆಗೆ ಅರ್ಹರಾದ ವಿದ್ಯಾರ್ಥಿಗಳು ಬೇಕಾಗಿರುವ ಸೂಕ್ತವಾದ ದಾಖಲೆಗಳನ್ನು ಹೊಂದಿರಬೇಕಾಗಿದ್ದು, ಎಲ್ಲಾ ದಾಖಲೆಗಳಿಗೆ ಕಾಲೇಜಿನ ಪ್ರಾಂಶುಪಾಲರ ಮೂಲಕ ಅಟೆಸ್ಟೆಡ್‌ ಮಾಡಿಸಬೇಕು. ಇನ್ನು, ಆಯ್ಕೆ ಆದ ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಅವಧಿಯಲ್ಲಿ ತಿಂಗಳಿಗೆ 1,500 ರೂ. ಮೊತ್ತವನ್ನು 10 ತಿಂಗಳ ಅವಧಿಗೆ 15,000 ರೂ ಪಡೆಯಲಿದ್ದು, ಖಾಸಗಿ ವಸತಿಗಳಲ್ಲಿ, ಬಿಬಿಎಂಪಿ, ಟೌನ್‌ ಮುನ್ಸಿಪಲ್‌ ಮತ್ತು ಕಾರ್ಪೊರೇಶನ್‌ ಮಿತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿರುವುದಿಲ್ಲ.

ಇದನ್ನೂ ಓದಿ: Bhagyalakshmi yojana : ಫಲಾನುಭವಿಗಳಿಗೆ ಸಿಗುವ ಮೊತ್ತ ಎಷ್ಟು? ಭಾಗ್ಯಲಕ್ಷ್ಮೀ ಬಾಂಡ್ ಹಣ ಡ್ರಾ ಮಾಡಲು ನಿಯಮಗಳೇನು?

Vidyasiri Yojana : ವಿದ್ಯಾಸಿರಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಏನೆಲ್ಲಾ ಪ್ರಯೋಜನವಾಗಲಿದೆ?

ಕರ್ನಾಟಕ ಸರ್ಕಾರದ ವಿದ್ಯಾಸಿರಿ ಯೋಜನೆಯು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸಿ ಶೈಕ್ಷಣಿಕ ಸಾಧನೆಗೆ ಸಹಾಯಮಾಡುತ್ತದೆ. ವಿದ್ಯಾಸಿರಿ ಸ್ಕಾಲರ್‌ಶಿಪ್ ಅನ್ನು ವಿದ್ಯಾರ್ಥಿಗಳು ಟ್ಯೂಶನ್ ಶುಲ್ಕ, ಪರೀಕ್ಷಾ ಶುಲ್ಕಗಳಿಗೆ ಬಳಸಬಹುದು. ಹಾಸ್ಟೆಲ್ ಗಳಲ್ಲಿ ಉಳಿದುಕೊಳ್ಳಲು ಅವಕಾಶ ಸಿಗದೇ ಇರುವಂತಹ ವಿದ್ಯಾರ್ಥಿಗಳಿಗೆ ತಮ್ಮ ಊಟ, ತಿಂಡಿ, ವಸತಿ ಖರ್ಚು ನೋಡಿಕೊಳ್ಳಲು ವಿದ್ಯಾರ್ಥಿ ವೇತನ ಸಹಾಯವಾಗುತ್ತದೆ. ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಬಹುದು. ಈ ಯೋಜನೆಯಿಂದ ಹೆಚ್ಚಿನ ಉದ್ಯೋಗವೂ ಸೃಷ್ಟಿಯಾಗಲಿದೆ.

ಇದನ್ನೂ ಓದಿ: ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಿದರೆ ಸಿಗುವ ಲಾಭಗಳು

Vidyasiri Yojana : ವಿದ್ಯಾಸಿರಿ ಯೋಜನೆಯ ಸೌಲಭ್ಯ ಪಡೆದುಕೊಳ್ಳುವುದು ಹೇಗೆ?

ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿದ್ಯಾಸಿರಿ ಯೋಜನೆಯನ್ನು ಹೇಗೆ ಪಡೆಯಬೇಕು ಎಂಬ ಅರಿವಿಲ್ಲದೆ ಎಷ್ಟೋ ವಿದ್ಯಾರ್ಥಿಗಳು ಇದರಿಂದ ವಂಚಿತರಾಗುತ್ತಾರೆ. ಯೋಜನೆಯ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳು ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು. ಇದರ ಸಂಪೂರ್ಣ ಮಾಹಿತಿಯನ್ನು ವಿಡಿಯೋದಲ್ಲಿ ನೋಡಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.