ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ಇದೀಗ ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.
ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ. ಜುಲೈ 24ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ರು. ಮಗನ ಸ್ಕೂಲ್ ಸೀಟ್ ವಿಚಾರಕ್ಕೆ ಚರ್ಚೆ ಮಾಡಿದ್ರು ಎನ್ನಲಾಗ್ತಿದೆ. ದರ್ಶನ್ ವಿಚಾರವಾಗಿ ಮಾತುಕತೆ ನಡೆದಿಲ್ಲ ಎನ್ನಲಾಗ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment