ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಈಶಾನ್ಯ ರಾಜ್ಯದ ಜನಪ್ರತಿಧಿಗಳ ಮನೆ ಉದ್ರಿಕ್ತರ ದಾಳಿ, ಇಂಟರ್ನೆಟ್‌ ಬಂದ್‌

ಮಣಿಪುರ (ಇಂಫಾಲ್‌): ಇತ್ತೀಚೆಗೆ ಮಣಿಪುರದಲ್ಲಿ ಉಗ್ರರಿಂದ ಅಪಹರಣಕ್ಕೆ ಒಳಗಾಗಿದ್ದರು ಎನ್ನಲಾದ 6 ಜನರ ಮೃತದೇಹಗಳು ಜಿರಿಬಾಂ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಇದರ ಬೆನ್ನಲ್ಲೇ ಇವರ ಸಾವು ಖಂಡಿಸಿ ರಾಜ್ಯದಲ್ಲಿ ಮತ್ತೆ ಹಿಂಸೆ ಆರಂಭವಾಗಿದೆ. ಉದ್ರಿಕ್ತರು ಮುಖ್ಯಮಂತ್ರಿ,…

ಮಣಿಪುರ (ಇಂಫಾಲ್‌): ಇತ್ತೀಚೆಗೆ ಮಣಿಪುರದಲ್ಲಿ ಉಗ್ರರಿಂದ ಅಪಹರಣಕ್ಕೆ ಒಳಗಾಗಿದ್ದರು ಎನ್ನಲಾದ 6 ಜನರ ಮೃತದೇಹಗಳು ಜಿರಿಬಾಂ ಜಿಲ್ಲೆಯಲ್ಲಿ ಪತ್ತೆಯಾಗಿವೆ. ಇದರ ಬೆನ್ನಲ್ಲೇ ಇವರ ಸಾವು ಖಂಡಿಸಿ ರಾಜ್ಯದಲ್ಲಿ ಮತ್ತೆ ಹಿಂಸೆ ಆರಂಭವಾಗಿದೆ. ಉದ್ರಿಕ್ತರು ಮುಖ್ಯಮಂತ್ರಿ, ಇಬ್ಬರು ಬಿಜೆಪಿ ಸಚಿವರು ಹಾಗೂ 3 ಶಾಸಕರ ಮನೆಗಳಿಗೆ ದಾಳಿ ಮಾಡಿದ್ದಾರೆ.

ದಾಳಿಗೊಳಗಾದ ಮನೆಗಳಲ್ಲಿ ಮುಖ್ಯಮಂತ್ರಿ ಬೀರೇನ್‌ ಸಿಂಗ್‌ ಅವರ ಇಂಫಾಲ್‌ನ ಖಾಸಗಿ ನಿವಾಸ ಹಾಗೂ ಅಳಿಯನಾಗಿರುವ ಶಾಸಕನ ಮನೆಯೂ ಸೇರಿದೆ. ಈ ವೇಳೆ ಬೀರೇನ್ ಮನೆಯಲ್ಲಿರಲಿಲ್ಲ. ಕಚೇರಿಯಲ್ಲಿ ಸುರಕ್ಷಿತವಾಗಿದ್ದರು ಎಂದು ಮೂಲಗಳು ಹೇಳಿವೆ. ಉದ್ರಿಕ್ತರ ಚದುರಿಸಲು ಪೊಲೀಸರು ಲಾಠಿ, ಅಶ್ರುವಾಯು ಪ್ರಯೋಗಿಸಿದ್ದಾರೆ.

ಇಂಫಾಲ್‌ನಲ್ಲಿ ವ್ಯಾಪಾರ ವಹಿವಾಟುಗಳು ಸ್ಥಗಿತವಾಗಿದ್ದು, ಇಂಫಾಲ್‌ನ ಪಶ್ಮಿಮ ಭಾಗಗಳಲ್ಲಿ ಟೈರ್‌ಗಳಿಗೆ ಬೆಂಕಿಯಿಟ್ಟು ಪ್ರತಿಭಟಿಸಲಾಗಿದೆ. ಮಾರುಕಟ್ಟೆ ಬಂದ್ ಮಾಡಲಾಗಿದೆ. ಭಾರಿ ಹಿಂಸೆ ಕಾರಣ ಇಂಫಾಲ್ ಪಶ್ಚಿಮ, ಪೂರ್ವ, ಬಿಷ್ಣುಪುರ, ತೌಬಾಲ್, ಕಾಕ್ಚಿಂಗ್, ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರ ಜಿಲ್ಲೆಗಳಲ್ಲಿ (7 ಜಿಲ್ಲೆಗಳಲ್ಲಿ) 2 ದಿನ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆ ಸ್ಥಗಿತಗೊಳಿಸಲಾಗಿದೆ. ಇಂಫಾಲ್ ಪಶ್ಚಿಮ ಹಾಗೂ ಪೂರ್ವ ಜಿಲ್ಲೆಗಳಲ್ಲಿ ಕರ್ಫ್ಯೂ ಸಾರಲಾಗಿದೆ. 6 ಠಾಣೆಗಳ ವ್ಯಾಪ್ತಿಯಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಆಫ್‌ಸ್ಪಾ) ಜಾರಿ ಮಾಡಲಾಗಿದೆ.

Vijayaprabha Mobile App free

ಸೋಮವಾರ ಮಣಿಪುರದ ಜಿರಿಬಾಂ ಎಂಬಲ್ಲಿ ನಡೆದ ಚಕಮಕಿ ವೇಳೆ 10 ಶಂಕಿತ ಕುಕಿ ಹಾಗೂ ಮಿಜೋ ಉಗ್ರರನ್ನು ಸಿಆರ್‌ಪಿಎಫ್‌ ಪಡೆಗಳು ಕೊಂದಿದ್ದವು. ಬಳಿಕ ನಿರಾಶ್ರಿತರ ಶಿಬಿರದಲ್ಲಿದ್ದ 3 ಮಹಿಳೆಯರು ಹಾಗೂ 3 ಮಕ್ಕಳು ನಾಪತ್ತೆಯಾಗಿದ್ದು, ಅವರನ್ನು ಉಗ್ರರು ಅಪಹರಿಸಿರುವುದಾಗಿ ಮೈತೇಯಿ ಸಮುದಾಯದವರು ಆರೋಪಿಸಿದ್ದರು.

ಈ ಪೈಕಿ ಓರ್ವ ಮಹಿಳೆ ಹಾಗೂ 2 ಮಕ್ಕಳು ಸೇರಿ 3 ಮಂದಿಯ ಶವಗಳು ಜಿರಿ ಹಾಗೂ ಬರಕ್‌ ನದಿಗಳ ಸಂಗಮಸ್ಥಾನದಲ್ಲಿ ಶನಿವಾರ ಬೆಳಗ್ಗೆ ದೊರಕಿವೆ. ಇದಕ್ಕೂ ಮುನ್ನ 3 ಶವಗಳು ಪತ್ತೆ ಆಗಿದ್ದವು. ಇದರೊಂದಿಗೆ ಎಲ್ಲ 6 ಶವಗಳೂ ಸಿಕ್ಕಂತಾಗಿದೆ. ಇವರ ಸಾವು ಖಂಡಿಸಿ ಹಿಂಸೆ ಆರಂಭವಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.