kiccha sudeep: ನಟ ಕಿಚ್ಚ ಸುದೀಪ್ ತಮ್ಮ ವೃತ್ತಿಜೀವನದಲ್ಲಿ ಹಲವಾರು ಪ್ರಶಂಸೆಗಳನ್ನು ಗಳಿಸಿದ್ದಾರೆ. 2001ರಲ್ಲಿ ತೆರೆಕಂಡ ಹುಚ್ಚ ಚಿತ್ರದಲ್ಲಿ ಸುದೀಪ್ ಕಿಚ್ಚ ಎಂಬ ಪಾತ್ರವನ್ನು ಚೆನ್ನಾಗಿ ನಿಭಾಯಿಸಿದ್ದರು. ಅದರ ಪ್ರಭಾವ ಎಷ್ಟು ಆಳವಾಗಿತ್ತೆಂದರೆ ಅಭಿಮಾನಿಗಳು ಸುದೀಪ್ ಅವರನ್ನು ಕಿಚ್ಚ ಹೆಸರಿನಿಂದ ಕರೆಯಲು ಪ್ರಾರಂಭಿಸಿದರು.
ಅಂದಿನಿಂದ ಕಿಚ್ಚ ಎಂಬುದು ಸುದೀಪ್ ಅವರ ಗುರುತಿನ ಅವಿಭಾಜ್ಯ ಅಂಗವಾಗಿದೆ. ಸುದೀಪ್ ಅವರ ಸಮಾಜಮುಖಿ ಕಾರ್ಯಕ್ಕೆ ಸಂದ ಗೌರವ ಡಾಕ್ಟರೇಟ್ ಅನ್ನು ನಿರಾಕರಿಸಿದ್ದಕ್ಕೆ ಮೆಚ್ಚುಗೆ ಗಳಿಸಿದ್ದಾರೆ.
ರಿಯಾಲಿಟಿ ಶೋಗಳಲ್ಲಿ ನಿರೂಪಕರಾಗಿ ಮನೆ ಮಾತಾಗಿರುವ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಬ್ಯುಸಿ ನಟ ಎನಿಸಿರುವ ಸುದೀಪ್ ರಿಯಾಲಿಟಿ ಶೋಗಳಲ್ಲಿ ನಿರೂಪಕರಾಗಿಯೂ ಕನ್ನಡಿಗರ ಮನೆಮಾತಾಗಿದ್ದಾರೆ. ಮೊದಲಿಗೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿಭಿನ್ನ, ವಿಶಿಷ್ಟ ರಿಯಾಲಿಟಿ ಶೋ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಪು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ನಂತರ ಕಲರ್ಸ್ ಕನ್ನಡದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಶೋನ 10 ಸೀಸನ್‌ಗಳನ್ನು ಯಶಸ್ವಿಯಾಗಿ ನಿರೂಪಿಸಿದ್ದಾರೆ. ಜೊತೆಗೆ ಕ್ರಿಕೆಟ್ (CCL)ನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಕನಾಗಿಯೂ ಸೈ ಎನಿಸಿಕೊಂಡಿರುವ ಕಿಚ್ಚ ಸುದೀಪ್
ನಟ ಸುದೀಪ್ ಕೇವಲ ನಟನಾಗಿ ಮಾತ್ರವಲ್ಲ, ನಿರ್ದೇಶಕನಾಗಿ ಕೂಡ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿದ್ದಾರೆ. 2006ರಲ್ಲಿ ತೆರೆಕಂಡ ಮೈ ಆಟೋಗ್ರಾಫ್ ಚಿತ್ರದಿಂದ ನಿರ್ದೇಶನಕ್ಕಿಳಿದ ಸುದೀಪ್ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಗಳಿಸಿದರು.
ನಂತರ ನಂ.73 ಶಾಂತಿನಿವಾಸ, ವೀರ ಮದಕರಿ, ಜಸ್ಟ್ ಮಾತ್ ಮಾತಲ್ಲಿ, ಕೆಂಪೇಗೌಡ, ಮಾಣಿಕ್ಯ ಸಿನಿಮಾಗಳನ್ನು ನಿರ್ದೇಶನ ಮಾಡಿದರು. ಇವುಗಳಲ್ಲಿ ನಾಲ್ಕು ಚಿತ್ರಗಳು ಬಾಕ್ಸಾಫಿಸ್‌ನಲ್ಲಿ ಅಭೂತಪೂರ್ವ ಯಶಸ್ಸು ಪಡೆದರೆ ಎರಡು ಚಿತ್ರಗಳು ಅತ್ಯುತ್ತಮ ವಿಮರ್ಶೆ ಪಡೆದುಕೊಂಡಿವೆ.
https://vijayaprabha.com/today-is-world-coconut-day/