Buddhism: ಹಿಂದೂ ಧರ್ಮ ಸುಧಾರಿಸುವ ಲಕ್ಷಣವಿಲ್ಲವೆಂದ ಸಚಿವ ಮಹದೇವಪ್ಪ!

ಬೆಂಗಳೂರು: ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ನನಗೆ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಎಂದು ಸಮಾಜ ಕಲ್ಯಾಣ…

ಬೆಂಗಳೂರು: ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ನನಗೆ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ.

ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ನನಗೆ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿ ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಬಾಬಾ ಸಾಹೇಬರ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.